8:23 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ವಿನಾಯಕ ಬಾಳಿಗ ಹತ್ಯೆ ಪ್ರಕರಣ: ಬಾಳಿಗ ಸಹೋದರಿ ರಾಜ್ಯಪಾಲರ ಭೇಟಿ; ವಿಶೇಷ ತನಿಖಾ ತಂಡ ನೇಮಿಸಲು ಮನವಿ

16/03/2022, 19:55

ಮಂಗಳೂರು(reporterkarnataka.com): ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ(SIT)ವನ್ನು ನೇಮಿಸುವಂತೆ ಬಾಳಿಗಾ ಅವರ ಸಹೋದರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲಾಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 8.20ರ ವೇಳೆಗೆ ವಿನಾಯಕ ಬಾಳಿಗ ಅವರ ಸಹೋದರಿ ಅನುರಾಧಾ ಬಾಳಿಗ ಅವರು ರಾಜ್ಯಪಾಲರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅನುರಾಧಾ ಬಾಳಿಗ ಅವರು ಹತ್ಯೆಗೀಡಾದ ತನ್ನ ಸಹೋದರನಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಶೇಷ ತನಿಖಾ ತಂಡ ನೇಮಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು.

ಈ ಕುರಿತು ರಿಪೋರ್ಟರ್ ಕರ್ನಾಟಕ ಅನುರಾಧಾ ಬಾಳಿಗ ಅವರನ್ನು ಸಂಪರ್ಕಿಸಿದಾಗ, ತಾನು ಮಂಗಳವಾರ ಬೆಳಗ್ಗೆ ಸರ್ಕಿಟ್ ಹೌಸ್ ನಲ್ಲಿ ರಾಜ್ಯಪಾಲರನ್ನು ಭೇಟಿಯಾಗಿರುವುದನ್ನು ದೃಢಪಡಿಸಿದರು. 

ಮನವಿ ಸ್ವೀಕರಿಸಿ ರಾಜ್ಯಪಾಲರು ಬೇಡಿಕೆಯನ್ನು ಪರಿಶೀಲಿಸಿ ತನ್ನಿಂದ ಆಗುವಂತಹ ಸಹಾಯವನ್ನು ಮಾಡುವ ಭರವಸೆ ನೀಡಿದ್ದಾರೆಂದು ಅನುರಾಧಾ ಬಾಳಿಗ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು