4:45 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ವಿನ್ಯಾಸ ಅನುಮೋದನೆ ಶುಲ್ಕ ಕಡಿತ: ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಸಂತಸ

08/07/2021, 09:53

ಮಂಗಳೂರು(reporterkarnataka news):

ನಗರ ಯೋಜನಾ ವಿಭಾಗಕ್ಕೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಈಗಾಗಲೇ ಸಂಗ್ರಹಿಸುತ್ತಿದ್ದ ವಿನ್ಯಾಸ ಅನುಮೋದನೆ ಶುಲ್ಕವನ್ನು ಕಡಿತಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಹೇಳಿದರು.

ಜನಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಮನಗಂಡು ಈ ಬಗ್ಗೆ ಶುಲ್ಕವನ್ನು ಪರಿಷ್ಕರಿಸುವಂತೆ ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಸರಕಾರಕ್ಕೆ ದಿನಾಂಕ ೩೧-೦೮-೨೦೨೦ ನಿರ್ಣಯಿಸಿ ಪತ್ರ ಬರೆಯಲಾಗಿತ್ತು. ಈ ಮನವಿಯನ್ನು ಪರಿಗಣಿಸಿ 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರು ಜನಸಾಮಾನ್ಯರ ಸಮಸ್ಯೆಯನ್ನು ಪರಿಗಣಿಸಿ ಶುಲ್ಕ ಕಡಿಮೆಗೊಳಿಸಿ ಆದೇಶ ನೀಡಿದ್ದಾರೆ. ಆದೇಶವನ್ನು ಹೊರಡಿಸುವಲ್ಲಿ ಕಾರಣೀಕರ್ತರಾದ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ , ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಅವರಿಗೆ ಧನ್ಯವಾದಗಳು ಎಂದು ಮಿಜಾರ್ ನುಡಿದರು.ಮುಡಾ ಕಮಿಷನರ್ ದಿನೇಶ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು