ಇತ್ತೀಚಿನ ಸುದ್ದಿ
ಅಮೆರಿಕದಲ್ಲಿ ಭಾರತೀಯರ ಮೇಲೆ ದೌರ್ಜನ್ಯ: ಕೇಂದ್ರ ಸರಕಾರ ವಿರುದ್ದ ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
15/02/2025, 19:30

ಅಮೆರಿಕದಲ್ಲಿ ಭಾರತೀಯರ ಮೇಲೆ ದೌರ್ಜನ್ಯ: ಕೇಂದ್ರ ಸರಕಾರ ವಿರುದ್ದ ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ತುಮಕೂರು(reporterkarnataka.com): ಅಮೆರಿಕದಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯ
ಮತ್ತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ನೀತಿಯನ್ನು
ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು
ಪ್ರತಿಭಟನೆ ನಡೆಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಭಾರತೀಯರ ಪರವಾಗಿ ನಿಲ್ಲದೆ
ನಿರ್ಲಕ್ಷ್ಯ ತೋರಿದೆ ಎಂದು
ಪ್ರತಿಭಟನಾಕಾರರು ಆರೋಪಿಸಿದರು.
ಭಾರತೀಯರನ್ನ ಗಡಿಪಾರು ಮಾಡುವ ಮೂಲಕ ಅಮೆರಿಕ ಆಡಳಿತ ಅನಾಗರೀಕವಾಗಿ ನಡೆದುಕೊಂಡಿದೆ ಎಂದು ಪ್ರತಿಭಟನಾಕಾರರು ಟೀಕಿಸಿದರು.
ಭಾರತೀಯರ ಕರೆತರಲು ಒಂದೇ ಒಂದು ವಿಮಾನ ವ್ಯವಸ್ಥೆ ಮಾಡಿಲ್ಲ, ಭಾರತೀಯರನ್ನು ಖೈದಿಗಳಂತೆ ನಡೆಸಿಕೊಂಡಿದ್ದಾರೆ ಎಂದು ದೂರಿದರು. ಪ್ರತಿಭಟನೆ ವೇಳೆ ಮೋದಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.