5:18 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ವಿರಾಜಪೇಟೆ: ಜಿಂಕೆಯ ಕೊಂಬು ಮಾರಾಟಕ್ಕೆ ಯತ್ನ ; ಆರೋಪಿಯ ಬಂಧನ

09/04/2022, 12:55

ವಿರಾಜಪೇಟೆ(reporterkarnataka.com):  ವಿರಾಜಪೇಟೆ ನಗರದ ಪಂಜರಪೇಟೆ ಸಮೀಪದ ಕಾವೇರಿ ಪದವಿಪೂರ್ವ ಕಾಲೇಜಿನ ಮುಖ್ಯ ದ್ವಾರದ ಒತ್ತಿನಲ್ಲಿರುವ ಸಾರ್ವಜನಿಕ ಬಸ್ಸು ತಂಗುದಾಣದ ಬಳಿ ಜಿಂಕೆ ಕೊಂಬುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಮೈಸೂರಿನವನಾದ ರವಿ ಅಲಿಯಾಸ್ ಮಂಜು ಎಂಬಾತ ಮೂರು ಜಿಂಕೆಯ ಕೊಂಬುಗಳನ್ನು ಎರಡು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿ ವಿರಾಜಪೇಟೆ ನಗರದ ಪಂಜರಪೇಟೆ ಸಮೀಪದ ಕಾವೇರಿ ಪದವಿಪೂರ್ವ ಕಾಲೇಜಿನ ಮುಖ್ಯ ದ್ವಾರದ ಒತ್ತಿನಲ್ಲಿರುವ ಸಾರ್ವಜನಿಕ ಬಸ್ಸು ತಂಗುದಾಣದ ಬಳಿ ಮಾರಾಟಕ್ಕಾಗಿ ಗಿರಾಕಿಗಳನ್ನು ಹುಡುಕುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ ವಿರಾಜಪೇಟೆ ತಾಲೂಕು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಂಬ್ಬದಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ವಿರಾಜಪೇಟೆ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್.ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ನೀಡಿದೆ. 

ಕಾರ್ಯಾಚರಣೆಯಲ್ಲಿ ಪೊಲೀಸ್ ಮಹಾ ನಿರೀಕ್ಷಕ  ಕೆ. ವಿ. ಶರತ್ ಚಂದ್ರ ರವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಎನ್ .ಟಿ. ಶ್ರೀನಿವಾಸ್ ರೆಡ್ಡಿ ಯವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ಸಿ. ಐ. ಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪ್ರಭಾರ ಆರಕ್ಷಕ ಉಪನಿರೀಕ್ಷಕರಾದ ಸಿ.ಯು.ಸವಿ, ಸಿಬ್ಬಂದಿಗಳಾದ ಟಿ. ಪಿ. ಮಂಜುನಾಥ, ಕೆ. ಎಸ್. ದೇವಯ್ಯ, ಸಿ. ಬಿ. ಬೀನ, ಎಸ್ ಎಂ ಯೋಗೇಶ್, ಪಿ. ಯು. ಮುನೀರ್, ಆರ್. ನಂದಕುಮಾರವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು