9:49 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ವಿರಾಜಪೇಟೆ: ಕಾರ್ಮಿಕರಿಂದಲೇ ಕಾಫಿ ಕಳವು; ಸಿಸಿ ಕ್ಯಾಮರಾದಲ್ಲಿ ಸೆರೆ

07/02/2026, 21:59

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಾದ್ಯಂತ ಕಾಫಿ ಕುಯಿಲು ಚುರುಕಾಗಿದ್ದು, ಉತ್ತಮ ಬೆಲೆಗೆ ಮಾರಾಟ ಮಾಡಲು ಬೆಳೆಗಾರರು ಅಕಾಲಿಕ ಮಳೆಯ ಭೀತಿಯಿಂದ ಶೀಘ್ರವಾಗಿ ಕಾಫಿ ಕುಯಿದು ಒಣಗಿಸಿ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ವಿರಾಜಪೇಟೆ ತಾಲ್ಲೂಕಿನ ಬಲ್ಯಮಂಡೂರು (ಕೊಡ್ಚಿ) ಗ್ರಾಮದ ಮಾಚಿಮಾಡ ಮಂದಣ್ಣ ರವರ ಕಾಫಿ ಕಣದಲ್ಲಿ ಹೀಗೆ ಕುಯುದು ಒಣಗಿಸಲು ಹಾಕಿದ್ದ ಕಾಫಿ ಬೇಜವನ್ನು ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿ ಸ್ವತ ಕಾರ್ಮಿಕರೇ ಚೀಲಗಟ್ಟಲೆ ಕಾಫಿಯನ್ನು ಅಲ್ಯೂಮಿನಿಯಂ ಮೊರದ ಸಹಾಯದಿಂದ ಮೂರು ಮಂದಿ ಕಾಫಿ ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಸ್ಥಳೀಯ ಕಾರ್ಮಿಕರ ಸಹಾಯದಿಂದಲೇ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ತೋಟದ ಮಾಲೀಕ ಕ್ಯಾಮೆರಾ ದೃಶ್ಯ ಅಧರಿಸಿ ಪೊಲೀಸ್ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು