ಇತ್ತೀಚಿನ ಸುದ್ದಿ
ವಿರಾಜಪೇಟೆ: ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಕಾರು ಅಪಘಾತ; ಅಪಾಯದಿಂದ ಪಾರು
30/07/2025, 23:36

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಪ್ರಯಾಣಿಸುತ್ತಿದ್ದ ಕಾರು ವಿರಾಜಪೇಟೆ ಪಟ್ಟಣದ ಹೊರವಲಯದಲ್ಲಿ ಅಪಘಾತಕ್ಕೀಡಾಗಿದ್ದು,ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಅವರು ಪ್ರಯಾಣಿಸುತ್ತಿದ್ದ ಕಾರು ಕಾವೇರಿ ಕಾಲೇಜು ಬಳಿಯ ತಿರುವಿನಲ್ಲಿ ಮಾರುತಿ 800 ಕಾರು ನಡುವೆ ಮುಖಮುಖಿ ಡಿಕ್ಕಿಯಾಗಿದ್ದು ಜಿಲ್ಲಾಧ್ಯಕ್ಷರು ಪ್ರಾಣಾಪಾಯ ದಿಂದ ಪಾರಾಗಿದ್ದಾರೆ.