8:59 PM Wednesday23 - September 2026
ಬ್ರೇಕಿಂಗ್ ನ್ಯೂಸ್
ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ…

ಇತ್ತೀಚಿನ ಸುದ್ದಿ

ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

08/08/2026, 13:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿ ಗಂಭೀರ ಗಾಯ ಗೊಳಿಸಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಯಲ್ಲಿ ನಡೆದಿದೆ. ಗ್ರಾಮದ ಕಾಫಿ ಬೆಳೆಗಾರರಾದ ಮೂಡಗದ್ದೆ ಜಯ ಎಂಬುವವರ ಪತ್ನಿ ಲೀಲಾ ಚಿರತೆ ದಾಳಿಗೆ ಒಳಗಾಗಿ ಪ್ರಣಾಪಾಯ ದಿಂದ ಪಾರಾಗಿ ಗೋಣಿಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಫಿ ತೋಟದಲ್ಲಿ ಕಾರ್ಮಿಕರು ಮಾಡುತ್ತಿರುವ ಕೆಲಸ ನೋಡಲೆಂದು ತೆರಳಿದ ಸಂದರ್ಭ ಈ ದಾಳಿ ನಡೆದಿದ್ದು, ಅಲ್ಲೇ ಇದ್ದ ಕಾರ್ಮಿಕರು ಲೀಲಾ ರನ್ನು ಹೆಚ್ಚಿನ ಅನಾಹುತ ಆಗದಂತೆ ಚಿರತೆಯಿಂದ ರಕ್ಷಣೆ ಮಾಡಿದ್ದಾರೆ. ಘಟನೆ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಚಿರತೆಯ ಚಲನವಲನ ಬಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಸೆರೆಗೆ ಬೋನ್ ಇರಿಸಿದ್ದು, ಮತ್ತೊಂದೆಡೆ ಸಾಕಾನೆ ಬಳಸಿ ಕಾರ್ಯಾಚರಣೆ ನಡೆಸಲು ನಿರ್ಧಾರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು