8:19 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

22/08/2026, 18:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದ ಎರಡು ದಿನಗಳ ಹಿಂದೆ ರಾತ್ರಿ ಪುತ್ರನೊಂದಿಗೆ ಮಲಗಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ತೋಟದ ತೆರೆದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವೀರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ಗ್ರಾಮದ ಪರಂಬು ಪೈಸಾರಿಯಲ್ಲಿ ನಡೆದಿದೆ.
ಮೃತರನ್ನು ಪರಂಬು ಪೈಸಾರಿ ನಿವಾಸಿ ದಿವಂಗತ ವೈ. ಮೇದು ಅವರ ಪುತ್ರ ವೈ.ಎಂ. ಉಮೇಶ್ (44) ಎಂದು ಗುರುತಿಸಲಾಗಿದೆ. ತೋಟದ ಕಾರ್ಮಿಕರಾಗಿದ್ದ ಉಮೇಶ್ ಅವರ ಪತ್ನಿ ಸುಮಾರು 10 ವರ್ಷಗಳ ಹಿಂದೆ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ಪುತ್ರನೊಂದಿಗೆ ವಾಸಿಸುತ್ತಿದ್ದ ಉಮೇಶ್ ಆ.17ರಂದು ರಾತ್ರಿ ಪುತ್ರನೊಂದಿಗೆ ಊಟ ಮಾಡಿ ಮಲಗಿದ್ದ ಉಮೇಶ್, ಮರುದಿನ ಬೆಳಗ್ಗೆ ಪುತ್ರ ಎಚ್ಚರಗೊಳ್ಳುವ ಮುನ್ನ ಮನೆಯಿಂದ ಹೊರಹೋಗಿದವರು ನಾಪತ್ತೆ ಯಾಗಿದ್ದರು.ಬಳಿಕ ಕುಟುಂಬಸ್ಥರು ಹಾಗೂ ಸ್ಥಳೀಯರು ಆ.18ರ ರಾತ್ರಿ ವರೆಗೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ದೊರೆತಿರಲಿಲ್ಲ.
ಈ ಹಿನ್ನೆಲೆಯಲ್ಲಿ ಮೃತರ ಸಂಬಂಧಿ ಜೂಬಿ ಅವರು ಆ.19ರಂದು ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಮೇಶ್ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಇಂದು ಮುಂಜಾನೆ ಪರಂಬು ಪೈಸಾರಿ ನಿವಾಸಿ ಪ್ರಕಾಶ್ ಅವರ ತೋಟದ ತೆರೆದ ಬಾವಿಯಲ್ಲಿ ಉಮೇಶ್ ಅವರ ಶವ ಪತ್ತೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಮಹಜರು ನಡೆಸಿ, ಮೃತದೇಹವನ್ನು ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು