1:48 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ ಬಂಧನ

20/09/2025, 21:58

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆಯ ಗಾಂಧಿನಗರದಲ್ಲಿ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಸ್ಪಾ ಮತ್ತು ಮಸಾಜ್ ಸೆಂಟರ್ ಜೊತೆಗೆ ವೇಶ್ಯಾವಾಟಿಕೆ ಯಲ್ಲಿ ತೊಡಗಿದ್ದ ಪ್ರಕರಣ ಸಂಬಂಧಿಸಿದಂತೆ ಕೊಡಗಿನ ಒಬ್ಬ ಪಿಂಪ್ ಸಹಿತ ಕೇರಳದ ಮೂವರ ಬಂಧನವಾಗಿದೆ.ಕಳೆದ ಆರು ತಿಂಗಳು ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ಈ ತಂಡ ಪೋಲಿಸ್ ಹಾಗೂ ಗುಪ್ತಚರ ದಳದ ನಾಲ್ವರ ಹೆಡೆ ಮುರಿ ಕಟ್ಟಿದ್ದು, ಕೃತ್ಯಕ್ಕೆ ಬಳಕೆಯಾಗಿದ್ದ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ.

ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿನ ಆರೆಂಜ್ ಫ್ಯಾಮಿಲಿ ಬ್ಯೂಟಿ ಪಾಲರ್ & ಸ್ಪಾ ಎಂಬ ಹೆಸರಿನಲ್ಲಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಮಾಹಿತಿ ಸಂಗ್ರಹಿಸಿ ದಿನಾಂಕ ಸೆಪ್ಟೆಂಬರ್ 18 ರಂದು ದಾಳಿ ನಡೆಸಿದ ಪೊಲೀಸರು ಮಹಿಳೆಯರನ್ನು ರಕ್ಷಣೆ ಮಾಡಿ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ್ದು ವೇಶ್ಯಾವಾಟಿಕೆ ನಡೆಸುತ್ತಿದ್ದ ಈ 4 ಜನ ಆರೋಪಿಗಳ ಮೇಲೆ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 3, 4, 5(ಸಿ), 7 Immortal Traffic (Prevention) Act ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಆರೋಪಿಗಳು ಕೇರಳದ ಕಣ್ಣೂರು ಮೂಲದ ಪ್ರದೀಪನ್. ಪಿ.ಪಿ, (48), ಕಲೇಶ್ ಕುಮಾರ್(45), ಶಾಜಿ(38) ಮತ್ತು ಕೊಡಗಿನ ವಿರಾಜಪೇಟೆಯ ಅಮ್ಮತಿ ಗ್ರಾಮದ ನೆಲ್ಲಮಕ್ಕಡ ಎ. ಪೊನ್ನಣ್ಣ(48) ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು