7:41 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ವಿರಾಜಪೇಟೆ: ಅಗತ್ಯ ವಸ್ತುಗಳ ಬೆಲೆಯೇರಿಕೆ ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮತ್ತು ಡಿವೈಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ

17/06/2026, 19:39

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarkarnataka@gmail.com

ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಮತ್ತು ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ, ಅಖಿಲ ಭಾರತ ಜನವಾದಿ ಮಹಿಳಾ ಸಂಘ ಮತ್ತು ಡಿವೈಎಫ್‌ಐ (DYFI) ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆಯ ಗಡಿಯಾರ ಕಂಬ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಪ್ರದರ್ಶನ ನಡೆಯಿತು.
ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯು ಜನಸಾಮಾನ್ಯರ ಜೀವನದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ದರದ ಏರಿಕೆಯು ಸಾರಿಗೆ ವೆಚ್ಚವನ್ನು ಹೆಚ್ಚಿಸಿದ್ದು, ಇದು ನೇರವಾಗಿ ದಿನಬಳಕೆಯ ವಸ್ತುಗಳು ಮತ್ತು ತರಕಾರಿಗಳ ಬೆಲೆ ಏರಿಕೆಗೆ ಕಾರಣವಾಗಿದೆ. ಅಡುಗೆ ಅನಿಲದ ಬೆಲೆಯಲ್ಲಿನ ಅತಿಯಾದ ಏರಿಕೆಯು ಮಧ್ಯಮ ಮತ್ತು ಬಡ ವರ್ಗದ ಕುಟುಂಬಗಳ ಬಜೆಟ್ ಅನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆ ಮತ್ತು ಯುದ್ಧದಂತಹ ಕಾರಣಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವು ಬೆಲೆಯನ್ನು ಏರಿಸುತ್ತಿದ್ದು, ಹಿಂದಿನ ಸರ್ಕಾರಗಳ ಕಾಲದ ಬೆಲೆಗಳಿಗೆ ಹೋಲಿಸಿದರೆ ಈಗಿನ ಸ್ಥಿತಿ ಜನಸಾಮಾನ್ಯರಿಗೆ ಅತ್ಯಂತ ಹೊರೆಯಾಗಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.
ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ರಾಜ್ಯದ ಕಾಂಗ್ರೆಸ್ ನಾಯಕರು ಮತ್ತು ವಿರಾಜಪೇಟೆಯ ಶಾಸಕರು ಸೇರಿದಂತೆ ಹಲವರು, ಜನರ ಕಷ್ಟಗಳನ್ನು ಆಲಿಸುವ ಬದಲು ಹೊಸ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಅಧಿಕಾರದ ಕುರ್ಚಿಗಳಿಗಾಗಿ ನಡೆಯುತ್ತಿರುವ ಈ ಆಂತರಿಕ ಕಚ್ಚಾಟದಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಮರೆತಿರುವುದು ಅತ್ಯಂತ ಖೇದಕರ. ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಕೇವಲ ಅಧಿಕಾರಕ್ಕಾಗಿ ಕಿತ್ತಾಡುವ ಇಂತಹ ರಾಜಕೀಯ ಧೋರಣೆಗಳನ್ನು ಸಾರ್ವಜನಿಕರು ಪ್ರಶ್ನಿಸಬೇಕಿದೆ.
ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಬೇಕೆಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಒತ್ತಾಯಿಸಿದರು ಈ ಪ್ರತಿಭಟನೆಯಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘದ ರಾಜ್ಯ ಸಮಿತಿ ಸದಸ್ಯೆ ಹಾಗೂ ಜಿಲ್ಲಾ ಸಂಚಾಲಕ ಸಮಿತಿ ಸದಸ್ಯೆಯಾದ ಪದ್ಮಿನಿ ಶ್ರೀಧರ್, ಡಿವೈಎಫ್‌ಐ ಕೊಡಗು ಜಿಲ್ಲಾ ಖಜಾಂಜಿ ಸಾಧಿಕ್ ಎ.ಎಚ್., ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪಿ.ಆರ್. ಭರತ್, ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರಾದ ಕೆ.ಎಸ್.ರಮೇಶ್,ಖಾಸಿಂ,ಆದಿವಾಸಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಪಿ.ಕೆ. ರಮೇಶ್, ಅಧ್ಯಕ್ಷರಾದ ಜಿ.ಆರ್. ಪ್ರೇಮ, ಖಜಾಂಜಿ ಭಾಗ್ಯ ಚಂಗಪ್ಪ, ಜಿಲ್ಲಾ ಮುಖಂಡರಾದ ಪುಷ್ಪ, ರವಿ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು