ಇತ್ತೀಚಿನ ಸುದ್ದಿ
ವಿರಾಜಪೇಟೆ: ಸೆಲೂನ್ ಮಾಲೀಕ ನೇಣು ಬಿಗಿದು ಆತ್ಮಹತ್ಯೆ
05/01/2026, 23:59
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ತನ್ನ ಸೆಲೂನ್ ನ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ.
ಮೂಲತಃ ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಮಾರ ಗೌಡನ ಹಳ್ಳಿ ನಿವಾಸಿಯಾಗಿರುವ ಅವರು ಹಾಲಿ ವಿರಾಜಪೇಟೆ ಪಟ್ಟಣದ ವಿಜಯನಗರದಲ್ಲಿ ವಾಸವಿದ್ದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯ ದಿಂದ ಬಳಲುತ್ತಿದ್ದರು ಎನ್ನಲಾಗಿದೆ. ವಿರಾಜಪೇಟೆ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.













