ಇತ್ತೀಚಿನ ಸುದ್ದಿ
Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ ಶರಣು
04/07/2025, 19:47

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್ ಇದ್ದ ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಜಗಳವಾಡಿಕೊಂಡು ಬಳಿಕ ನೇಣಿಗೆ ಶರಣಾದ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆಯಲ್ಲಿ ಚೆಸ್ಕಾಂ ನಲ್ಲಿ ವಿದ್ಯುತ್ ಕಂಬ ಅಳವಡಿಸುವ ಮತ್ತು ಆಟೋ ಓಡಿಸಿಕೊಂಡು ಜೀವನ ಮಾಡುತ್ತಿದ್ದ ಶರತ್ 30 ಮೃತ ವ್ಯಕ್ತಿ. ಕಳೆದ 8 ವರ್ಷಗಳಿಂದ ಎರಡು ಮಕ್ಕಳ ತಾಯಿ ಸಾವಿತ್ರಿ ಎಂಬಾಕೆಯೊಂದಿಗೆ ಇಲ್ಲಿನ ಗಾಂಧಿನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಜೀವನ ನಡೆಸಿ ಕೊಂಡಿದ್ದ ಶರತ್ ಸಾವಿತ್ರಿಯೊಂದಿಗೆ ಜಗಳ ಮಾಡಿಕೊಂಡಿದ್ದು, ಬಳಿಕ ಕುಡಿದ ನಶೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಮೃತನ ತಾಯಿ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.