ಇತ್ತೀಚಿನ ಸುದ್ದಿ
ವಿಷಾಹಾರ ಸೇವನೆ: ಸಿಟಿ ನರ್ಸಿಂಗ್ ಕಾಲೇಜಿನ ಆಡಳಿತ ಮಂಡಳಿಯ ವಿರುದ್ಧ ಎಫ್ ಐಆರ್
07/02/2023, 16:43

ಮಂಗಳೂರು(reporterkarnataka.com): ಸಿಟಿ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಿಷಾಹಾರ ಸೇವನೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಹಾಸ್ಟೆಲ್ ಊಟವಾದ ಬಳಿಕ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರು, ಇವರನ್ನು ನಗರದ ಎ.ಜೆ. ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು..
ಶಕ್ತಿನಗರದಲ್ಲಿರುವ ಸಿಟಿ ಹಾಸ್ಪಿಟಲ್ ಗೆ ಸೇರಿದ ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿತ್ತು. ಅಸ್ವಸ್ಥ ವಿದ್ಯಾರ್ಥಿನಿಯರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡುವಲ್ಲಿ ಕಾಲೇಜು ಆಡಳಿತ ಮಂಡಳಿ ವಿಫಲವಾಗಿತ್ತು ಎಂದು ಆರೋಪಿಸಲಾಗಿದೆ. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಅವರ ವರದಿಯ ಆಧಾರದ ಮೇಲೆ ಕದ್ರಿ ಠಾಣೆಯಲ್ಲಿ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.