7:19 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ವಿಶಾಖಪಟ್ಟಣದಿಂದ ತಂದ 6 ಕೆಜಿಗೂ ಅಧಿಕ ಗಾಂಜಾ ವಶ: ಆರೋಪಿ ಬಂಧನ; 9 ಲಕ್ಷ ರೂ. ಮೌಲ್ಯದ ಸೊತ್ತು ವಶ

27/03/2024, 22:10

ಮಂಗಳೂರು(reporterkarnataka.com):ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಕುಡುಪು ಪೆದಮಲೆಯ ಕೆಲರಾಯ್ ಚರ್ಚ್ ರೋಡ್ ನಿವಾಸಿ ನಿಶಾಂತ್ ಶೆಟ್ಟಿ(35) ಎಂದು ಗುರುತಿಸಲಾಗಿದೆ. ಈತ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದು,
6.325 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ವಿಶಾಖಪಟ್ಟಣದಿಂದ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು ನಗರಕ್ಕೆ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಅದನ್ನು ಸಣ್ಣ ಸಣ್ಣ ಪ್ಯಾಕೆಟ್ ಗಳನ್ನಾಗಿ ಮಾಡಿಕೊಂಡು ಮಂಗಳೂರಿನ ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದಾಗ ದಸ್ತಗಿರಿ ಮಾಡಲಾಗಿದೆ. ಈತನಿಂದ
ಅಶೋಕ್ ಲೈಲ್ಯಾಂಡ್ ದೋಸ್ತ್ ಗೂಡ್ಸ್ ಟೆಂಪೋ,
1,50,000 ರೂ. ಮೌಲ್ಯದ 6 ಕೆಜಿ 325 ಗ್ರಾಂ ಗಾಂಜಾ, 2 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪಕ ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 9,11,500/- ಆಗಿರುತ್ತದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಪ್ರಕರಣ, ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ವಿಟ್ಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹೀಗೆ ಒಟ್ಟು 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತದೆ.
ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಬಸವರಾಜಪ್ಪ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು