8:07 PM Sunday31 - August 2025
ಬ್ರೇಕಿಂಗ್ ನ್ಯೂಸ್
ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ

ಇತ್ತೀಚಿನ ಸುದ್ದಿ

ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

06/07/2025, 20:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ ಕಾಫಿನಾಡಿಗೆ ಭೇಟಿ ನೀಡದಂತೆ ಒಂದು ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ.
ಚಿಕ್ಕಮಗಳೂರು ಜಿಲ್ಲಾಡಳಿತ ಶರಣ್ ಪಂಪ್ ವೆಲ್ ಅವರಿಗೆ
6-7-25 ರಿಂದ 4-8-25ರ 30 ದಿನಗಳ ಕಾಲ ನಿರ್ಬಂಧ ಹೇರಿದೆ. ಶರಣ್ ಪಂಪ್ ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಚಿಕ್ಕಮಗಳೂರು, ಮೂಡಿಗೆರೆ, ಆಲ್ದೂರಿನಲ್ಲಿ ಪಂಪ್ ವೆಲ್ ಕರೆಸಿ ಬೈಠಕ್ ಹಮ್ಮಿಕೊಳ್ಳಲಾಗಿದೆ. ಶರಣ್ ಪಂಪ್ ವೆಲ್ ಕೋಮುದ್ವೇಷ ಹರಡುವ ಭಾಷಣ ಮಾಡುವ ಪ್ರವೃತ್ತಿ ಉಳ್ಳವರಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಚಿಕ್ಕಮಗಳೂರು ಸೇರಿ ಕೆಲ ಪಟ್ಟಣಗಳು ಮತೀಯ ಸೂಕ್ಷ್ಮ ಪ್ರದೇಶವಾಗಿದೆ.
ಸಣ್ಣ ಘಟನೆಯೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಭಂಗ ತರುವ ಸಾಧ್ಯತೆಗಳಿವೆ.
ಹಾಗಾಗಿ, ಮುಂದಿನ 30 ದಿನಗಳ ಕಾಲ ಪಂಪ್ ವೆಲ್ ಗೆ ಚಿಕ್ಕಮಗಳೂರು ಜಿಲ್ಲೆಗೆ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು