9:00 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ : 2 ಪದಕ ಗೆದ್ದ ಭಾರತದ ಮೊದಲ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್

15/09/2022, 09:38

ಬೆಲ್‌ಗ್ರೇಡ್(reporterkarnataka.com): ವಿನೇಶ್ ಫೋಗಟ್ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ 2 ಪದಕಗಳನ್ನು ಜಯಿಸಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಸ್ವೀಡನ್‌ನ ಎಮ್ಮಾ ಜೋನ್ನಾ ಮಾಲ್ಮ್‌ಗ್ರೆನ್‌ರನ್ನು ಮಣಿಸಿದ್ದಾರೆ.

ಬುಧವಾರ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಕಂಚಿಗಾಗಿ ನಡೆದ ಸ್ಪರ್ಧೆಯಲ್ಲಿ 28ರ ಹರೆಯದ ವಿನೇಶ್ 8-0 ಅಂತರದಿಂದ ಜಯ ಸಾಧಿಸಿದರು. ವಿನೇಶ್ 2019ರಲ್ಲಿ ಕಝಕ್‌ಸ್ತಾನದಲ್ಲಿ ನಡೆದಿದ್ದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕೂಡ ಕಂಚು ಜಯಿಸಿದ್ದರು. ಈ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಸೋತಿದ್ದ ವಿನೇಶ್ ಈ ಗೆಲುವು ಮಹತ್ವ ಪಡೆದಿದೆ.

ಮಂಗಳವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ವಿನೇಶ್ ಮಂಗೋಲಿಯದ ಖುಲನ್ ಬತ್ಖುಯೋಗ್ ವಿರುದ್ಧ ಸೋತಿದ್ದರು. ಖುಲನ್ ಫೈನಲ್‌ಗೆ ತಲುಪಿದ ಕಾರಣ ರಿಪಿಚೇಜ್ ಸುತ್ತಿನ ಮೂಲಕ ಕಂಚಿನ ಪದಕಕ್ಕಾಗಿ ನಡೆದ ಪ್ಲೇ ಆಫ್‌ನಲ್ಲಿ ಆಡುವ ಅವಕಾಶವನ್ನು ವಿನೇಶ್ ಪಡೆದರು. ರಿಪಿಚೇಜ್ ಸುತ್ತಿನಲ್ಲಿ ಕಝಕಿಸ್ತಾನದ ಎಶಿಮೋವಾರನ್ನು 4-0 ಅಂತರದಿಂದ ಸೋಲಿಸಿದ್ದರು.ಅಝರ್‌ಬೈಜಾನ್‌ನ ಎದುರಾಳಿ ಗುರ್ಬನೊವಾ ಗಾಯಗೊಂಡಿದ್ದ ಕಾರಣ ವಿನೇಶ್ ಕಂಚಿನ ಪದಕದ ಸುತ್ತಿಗೆ ತೇರ್ಗಡೆಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು