12:13 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ಗಜ ಪಡೆ: ಸಚಿವ ಈಶ್ವರ ಖಂಡ್ರೆ ವಿಧ್ಯುಕ್ತ ಚಾಲನೆ

01/09/2023, 15:16

ಮೈಸೂರು(reporterkarnataka.com): ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಗಜ ಪಯಣಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು.
ಈ ಬಾರಿಯೂ ಅಭಿಮನ್ಯು ಆನೆಯೇ ಅಂಬಾರಿ ಹೊರುತ್ತದೆ. ಕಂಜನ್ ಈ ಬಾರಿ ದಸಾರಗೆ ಹೊಸ ಸೇರ್ಪಡೆಯಾಗಿದೆ. ನಿಶಾನೆ ಆನೆಯನ್ನ ಇನ್ನೂ ನಿರ್ಧಾರ ಮಾಡಿಲ್ಲ.
ಒಂದೂವರೆ ತಿಂಗಳು ದಸರಾ ಗಜಪಡೆಗಳು ತಾಲೀಮಿನಲ್ಲಿ ಭಾಗಿಯಾಗುತ್ತದೆ. ನಾಡ ಅದಿದೇವತೆ ಚಾಮುಂಡಿ ತಾಯಿಯ ಆಶೀರ್ವಾದ ಎಲ್ಲರ ಮೇಲೆ ಇರಲಿ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಮಾತನಾಡಿ, ಈ ಬಾರಿ ಅದ್ದೂರಿ ದಸರಾ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದ್ದೂರಿ ದಸರಾ ಆಚರಣೆಗೆ ಸಿಎಂ ಸೂಚನೆ ನೀಡಿದ್ದಾರೆ. 30 ಕೋಟಿ ಅನುದಾನ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ಮೊದಲ ಹಂತದಲ್ಲಿ 9 ಆನೆಗಳು ಕಾಡಿನಿಂದ ನಾಡಿಗೆ ಬರುತ್ತಿವೆ. ಇನ್ನೂ 5 ಆನೆಗಳು ನಂತರ ಅರಮನೆಗೆ ಬರುತ್ತದೆ. ಮಾವುತರು ಹಾಗೂ ಕಾವಾಡಿಗರಿಗೆ ಪ್ರೋತ್ಸಾಹ ನೀಡುತ್ತೇವೆ. ಧಾರ್ಮಿಕ ವಿಚಾರ, ರಾಜ್ಯಡಳಿತವನ್ನ ಸಂರಕ್ಷಣೆ ಮಾಡುವ ದೃಷ್ಟಿಯಿಂದ ಈ ಭಾರಿ ದಸರಾ ಆಚರಣೆ ಮಾಡುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು