ಇತ್ತೀಚಿನ ಸುದ್ದಿ
ವಿಶ್ವ ಸ್ತನ್ಯಪಾನ ಸಪ್ತಾಹ-2022′: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ ವರೆಗೆ ಜಾಥಾ
04/08/2022, 19:02

ಮಂಗಳೂರು(reporterkarnataka.com): ‘ವಿಶ್ವ ಸ್ತನ್ಯಪಾನ ಸಪ್ತಾಹ-2022’ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುನಿಸೆಫ್ ಮತ್ತು ಮಂಗಳೂರಿನ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಆವರಣದಿಂದ ಸರಕಾರಿ ಲೇಡಿಗೋಶನ್ ಆಸ್ಪತ್ರೆ ವರೆಗೆ ಜಾಥಾ ನಡೆಸಲಾಯಿತು.
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ರಾಜೇಶ್ ಬಿ.ವಿ. ಜಾಥಾಕ್ಕೆ ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು. ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ., ಜಿಲ್ಲಾ ಶುಶ್ರೂಷಣಾಧಿಕಾರಿ ಲಿಸ್ಸಿ, ಯುನಿಸೆಫ್ ಐಐಹೆಚ್‍ಎಂ ಜಿಲ್ಲಾ ಸಂಯೋಜಕರು,ವಿಜಯ್ ಕುಮಾರ್, ಪಾಧರ್ ಮುಲ್ಲರ್ ನರ್ಸಿಂಗ್ ಕಾಲೇಜು ಎನ್.ಎಸ್.ಎಸ್ ಸಂಯೋಜಕ ಅಭಿನ್ ,ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು
ಎನ್.ಎಸ್.ಎಸ್ ಸಂಯೋಜಕರಾದ ಪ್ರಿಯಾ ಪಿರೇರಾ ಮುಂತಾದವರು ಭಾಗವಹಿಸಿದರು.