3:59 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ವಿಶ್ವ ಟೇಕ್ವಾಂಡೋ: ಸಂಹಿತಾಗೆ ಎರಡು ಕಂಚಿನ ಪದಕ

31/10/2024, 15:34

ಮಂಗಳೂರು(reporterkarnataka.com): ಬ್ಯಾಂಕಾಕ್‌ನಲ್ಲಿ ನಡೆದ ಟೇಕ್ವಾಂಡೋ ವಿಶ್ವ ಚಾಂಪಿಯನ್‌ ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಎರಡು ಕಂಚಿನ ಪದಕ ಗಳಿಸಿದ್ದಾರೆ.


ಸೀನಿಯರ್‌ ವಿಭಾಗದಲ್ಲಿ ಸ್ಪರ್ಧಿಸಿ ಪೂಮ್ಸೆ ಮತ್ತು ಕ್ಯೂರೋಗಿ ವಿಭಾಗದಲ್ಲಿ ಪದಕ ಗಳಿಸಿದರು.
೨೦೨೧ರಲ್ಲಿ ನೇಪಾಳದಲ್ಲಿ ನಡೆದ ಜೂನಿಯರ್‌ ಚಾಂಪಿಯನ್‌ಶಿಪ್‌ ನಲ್ಲಿ ಚಿನ್ನದ ಪದಕ, ೨೦೨೨ರಂದು ಮಲೇಷ್ಯಾದಲ್ಲಿ ಬೆಳ್ಳಿ ಪದಕ, ೨೦೨೩ರಲ್ಲಿ ಮಲೇಷ್ಯಾದಲ್ಲಿ ಚಿನ್ನದ ಮತ್ತು ಕಂಚಿನ ಪದಕ ಗಳಿಸಿದ್ದರು.
ಈ ಬಾರಿ ಸೀನಿಯರ್‌ ವಿಭಾಗದಲ್ಲಿ ಸ್ಪರ್ಧಿಸಿ ಸಾಧನೆ ಮಾಡಿದ್ದಾರೆ. ನಿಟ್ಟೆ ಎನ್‌ಎಂಎಎಐಟಿ ಯಲ್ಲಿ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿರುವ ಸಂಹಿತಾ, ಕದ್ರಿಯ ವಾಸುದೇವ ಭಟ್‌ ಮತ್ತು ದೀಪಾ ಕೆ.ಎಸ್.‌ ದಂಪತಿ ಪುತ್ರಿ. ಗುರುರಾಜ್‌ ಇಟಗಿ ಮತ್ತು ನಿಖಿಲ್‌ ಶೆಟ್ಟಿ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು