11:09 PM Saturday21 - September 2024
ಬ್ರೇಕಿಂಗ್ ನ್ಯೂಸ್
ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ

ಇತ್ತೀಚಿನ ಸುದ್ದಿ

ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​

21/09/2024, 23:03

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ವಾರ್ಷಿಕ ಪಟ್ಟಿಯಲ್ಲಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ.
ವಿವಿಯ ಗಣಿತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಮತ್ತು ಕೊಪ್ಪಳ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ್ ಮತ್ತು ಗಣಿತಶಾಸ್ತ್ರ ಮತ್ತು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ.ಹನುಮೇಶ್ ವೈದ್ಯ ಸತತ ಎರಡನೇ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅಶ್ವಿನ್ ಪಿ. ಇದೇ ಮೊದಲ ಬಾರಿ ಸ್ಥಾನ ಪಡೆದಿದ್ದಾರೆ.
ವಿಶ್ವದರ್ಜೆಯ ಗುಣಮಟ್ಟದ ಸಂಶೋಧನಾ ಲೇಖನ, ಸಂಯೋಜಿತ ಮಾನದಂಡಗಳನ್ನು ಆಧರಿಸಿ ವಿಶ್ವದ ಉತ್ತಮ ಸಂಶೋಧಕರನ್ನು ಗುರುತಿಸಿ ಸ್ಟ್ಯಾನ್‌ಫೋರ್ಡ್‌ ವಿಶ್ವವಿದ್ಯಾಲಯವು ವಾರ್ಷಿಕ ಪಟ್ಟಿ ಬಿಡುಗಡೆ ಮಾಡುತ್ತದೆ.
ಗುಣಮಟ್ಟದ ಸಂಶೋಧನಾ ಲೇಖನಗಳಿಗೆ ಹೆಸರುವಾಸಿಯಾಗಿರುವ ‘ಎಲ್ಸ್ವೀಯರ್’ ಎಂಬ ಸಂಸ್ಥೆ ಸಹಭಾಗಿತ್ವದಲ್ಲಿ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವು ಕಳೆದ ವಾರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಪಂಚದ ಒಟ್ಟು ಸಂಶೋಧನಕಾರರಲ್ಲಿ ಶೇ. 2ರಷ್ಟು ಖ್ಯಾತನಾಮ ವಿಜ್ಞಾನಿಗಳನ್ನು ವಿವಿಧ ವರ್ಗಗಳಲ್ಲಿ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು