8:15 PM Monday20 - January 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಐಟಿ ಹಬ್, ವ್ಯೂಹಾತ್ಮಕ ನಗರ; ಇಲ್ಲೇ ಐಕ್ಯಾಟ್ ಕೇಂದ್ರ ಖಚಿತ: ಕೇಂದ್ರ… ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ 5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ… ಮಂಗಳೂರಿನ ಜನತೆಗೆ ಕಲುಷಿತ ನೀರು ಪೂರೈಕೆ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ… ಭಾರತಿ ಏರ್‌ಟೆಲ್ ಮತ್ತು ಬಜಾಜ್ ಫೈನಾನ್ಸ್ ನಿಂದ ಹಣಕಾಸಿನ ಸೇವೆಗಳಿಗಾಗಿ ಅತಿದೊಡ್ಡ ಡಿಜಿಟಲ್… ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ…

ಇತ್ತೀಚಿನ ಸುದ್ದಿ

ವಿಕಲಚೇತನರಿಗೆ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸಿ: ಮೇಯರ್ ಮನೋಜ್ ಕುಮಾರ್

04/12/2024, 02:25

ಮಂಗಳೂರು(reporterkarnataka.com):ವಿಕಲಚೇತನರಿಗೆ ಸಿಗುವ ಸೌಲಭ್ಯಗಳನ್ನು ಅತ್ಯಂತ ಶೀಘ್ರ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮೇಯರ್ ಮನೋಜ್ ಕುಮಾರ್ ಹೇಳಿದರು.
ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಲಯನ್ಸ್ ಕ್ಲಬ್ ಗಾಂಧೀನಗರ, ಶಿಶು ಕೇಂದ್ರೀಕೃತ ಶಾಲೆಗಳ ಸಂಯುಕ್ರ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರಕಾರ, ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ವಿಕಲಚೇತನರ ಸಬಲೀಕರಣಕ್ಕೆ ಹಲವಾರು ಸೌಲಭ್ಯಗಳನ್ನು ನೀಡುತ್ತಿವೆ. ಇವುಗಳಿಗೆ ಫಲಾನುಭವಿಗಳು ಅಲೆದಾಡುವಂತಾಗಬಾರದು. ಅರ್ಹರ ಮನೆ ಬಾಗಿಲಿಗೆ ತಲುಪಿಸಲು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಜಿ.ಪಂ. ಸಹಾಯಕ ಕಾರ್ಯದರ್ಶಿ ಸುಧೀರ್ ಗಾಂವ್ಕರ್ ಮಾತನಾಡಿದರು. ಉಪಮೇಯರ್ ಭಾನುಮತಿ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ನಗರ ಸಿಡಿಪಿಓ ಶ್ವೇತಾ, ಗ್ರಾಮಾಂತರ ಸಿಡಿಪಿಓ ಶೈಲಾ, ಗಣೇಶ್ ಶೆಟ್ಟಿ, ಮನೋಹರ್ ಉಳ್ಳಾಲ, ಅಶೋಕ್ ಪೈ ಮತ್ತಿತರರು ಇದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ರಶ್ಮಿ ಸ್ವಾಗತಿಸಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಹರೀಶ್ ವಂದಿಸಿದರು. ಡಾ.ವಸಂತ ಕುಮಾರ್ ಶೆಟ್ಟಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿವಿಧ ವಿಶೇಷ ಶಾಲೆಗಳ ವಿದ್ಯಾರ್ಥಿಗಳಾದ ಆಶೀರ್ವಾದ್ ಬಿ. ಶೆಟ್ಟಿ, ದೀಕ್ಷಿತಾ, ರೋಹಿತ್, ಯಶ್, ಭವ್ಯ ದೇವಾಡಿಗ, ಫಾತಿಮತುಲ್ ಅಫ್ರೀನಾ, ಕೀರ್ತಿಕಾ, ಪ್ರದೀಪ್, ಮುಸ್ತಫಾ, ಜ್ಯೋತಿ, ವರುಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಏರ್ಪಡಿಸಿದ ವಿಶೇಷ ಶಾಲಾ ಮಕ್ಕಳ ಕ್ರೀಡಾಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಾಧಕರಾದ ಅಬ್ದುಲ್ ಹಮೀದ್ ತುಂಬೆ, ದುರ್ಗಾಲಕ್ಷ್ಮೀ ಕಾವೂರು, ವಿಶ್ವನಾಥ ಶೆಟ್ಟಿಗಾರ್ ಅವರನ್ನು ಸನ್ಮಾನಿಸಲಾಯಿತು. ಹಿರಿಯ ನಾಗರೀಕರ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು