6:16 AM Tuesday7 - January 2025
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ… ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ ಬೆಂಗಳೂರು: 22ನೇ ಚಿತ್ರಸಂತೆ ಉದ್ಘಾಟನೆ; ಕಲಾಕೃತಿ ಕೊಂಡು ಕಲಾವಿದರ ಬೆಂಬಲಿಸಲು ಮುಖ್ಯಮಂತ್ರಿ ಕರೆ ವಿರೋಧ ಪಕ್ಷ ಆರೋಪ ಮಾಡಿದರೆ ಸಾಬೀತು ಮಾಡಬೇಕು: ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಇಡಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ದಾಳಿ ಮಾಡಿ ಲಕ್ಷಾಂತರ ರೂಪಾಯಿ ಲೂಟಿ: ಕಠಿಣ… ಬೆಂಗಳೂರು: ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಲು ಸೂಚನೆ ಎನ್. ಆರ್. ಪುರ: ರಾಜ್ಯ ಹೆದ್ದಾರಿಯಲ್ಲಿ ಓಡಾಡಿದ ಕಾಡಾನೆ; ನಾಗರಿಕರಲ್ಲಿ ಹೆಚ್ಚಿದ ಆತಂಕ ದೀರ್ಘಾವಧಿ ಸಾಲ 137.85 ಕೋಟಿಗಳ ಅನುದಾನ ವಿನಿಯೋಗ: ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆ: ನಕಲಿ ಟ್ರಸ್ಟ್ ಕಾರ್ಯಾಚರಣೆ; ಪೊಲೀಸರಿಗೆ ದೂರು

20/02/2024, 22:29

ಕೊಲ್ಲೂರು(reporterkarnataka.com): ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆಯೊಂದು ಬೆಳಕಿಗೆ ಬಂದಿದೆ. ಕೊಲ್ಲೂರು ಮೂಕಾಂಬಿಕೆ ದೇಗುಲದ ಹೆಸರಿನಲ್ಲಿ ನಕಲಿ ಟ್ರಸ್ಟ್‌ ರಚಿಸಿ ಹಣ ಸಂಗ್ರಹಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೇರಳ ಮತ್ತು ತಮಿಳುನಾಡಿನ ಮೂಕಾಂಬಿಕೆ ಭಕ್ತರನ್ನು ಟಾರ್ಗೆಟ್ ಮಾಡಿ ಈ ನಕಲಿ ಟ್ರಸ್ಟ್ ನ ಲಿಂಕ್ ಹರಿಯಬಿಡಲಾಗಿದೆ.
ದೇಗುಲಕ್ಕೆ ದೇಣಿಗೆ, ಹರಕೆ ಸಲ್ಲಿಸುವ ಭಕ್ತರು ಇದರಲ್ಲಿ ದುಡ್ಡು ಕಳುಹಿಸಬಹುದು ಎಂದು ನಮೂದಿಸಲಾಗಿದೆ. ಭಕ್ತರೊಬ್ಬರು ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್‍ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ಬಂದಿದೆ. ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕೇರಳದಲ್ಲಿ ಈ ಟ್ರಸ್ಟ್ ನೋಂದಣಿಯಾಗಿದೆ ಎನ್ನಲಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. 2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮೋಸ ಮಾಡುಲಾಗುತ್ತಿದೆ ತಿಳಿದು ಬಂದಿದೆ. ಭಾರೀ ಮೊತ್ತದ ದುಡ್ಡು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು