11:55 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ನಡಿಗೆ ತಾಲೀಮು ಆರಂಭ; ಕ್ಯಾಪ್ಟನ್ ಅಭಿಮನ್ಯು ನೇತೃತ್ವ

14/08/2022, 20:16

ಮೈಸೂರು(reporterkarnataka.com): ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನಲೆಯಲ್ಲಿ ಭಾನುವಾರದಿಂದ ದಸರಾ ಗಜಪಡೆಗೆ ತಾಲೀಮು ಆರಂಭಿಸಲಾಯಿತು. ಮೈಸೂರು ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಪ್ರತಿದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ. ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನ ಅರಮನೆ ಅವರಣದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕೋರೋನಾ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಆನೆಗಳು ಅರಮನೆ ಆವರಣದಲ್ಲಿಯೇ ತಾಲೀಮು ನಡೆಸಲಾಗಿತ್ತು. ಎರಡು ವರ್ಷಗಳ ನಂತರ ಮತ್ತೆ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ವಾಯುವಿಹಾರಕ್ಕೆ ತೆರಳುತ್ತಿವೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು ಕೆ.ಆರ್. ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದಿಕ್ ಸರ್ಕಲ್, ಬಂಬೂ ಬಜಾರ್ ರಸ್ತೆ ಮೂಲಕ ಬನ್ನಿ ಮಂಟಪ ತಲುಪುತ್ತದೆ. ಮತ್ತೆ ಬನ್ನಿ ಮಂಟಪದಿಂದ ಅರಮನೆಗೆ ವಾಪಾಸ್ ಆಗಲಿವೆ.

ಈ ವೇಳೆ ಡಿಸಿಎಫ್ ಕರಿಕಾಳನ್ ಮಾತನಾಡಿ, ದಸರಾ ಮಹೋತ್ಸವ ಹಿನ್ನಲೆಯಲ್ಲಿ ಆನೆಗಳಿಗೆ ಇಂದಿನಿಂದ ತಾಲೀಮು ಪ್ರಾರಂಭ ಮಾಡಲಾಗಿದೆ. ಆನೆಗಳನ್ನು ತೂಕ ಮಾಡಲಾಗಿದೆ, ಎಲ್ಲ ಆನೆಗಳು ಅರೋಗ್ಯವಾಗಿದೆ. ಮತ್ತೊಂದು ವಿಶೇಷವೆನೆಂದರೆ ನಗರ ವಾತಾವರಣಕ್ಕೆ ಆನೆಗಳು ಹೊಂದಿಕೊಂಡಿದೆ. ಒಂದು ವಾರದ ನಂತರ ಭಾರ ಹೊರುವ ತಾಲೀಮು ಪ್ರಾರಂಭ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು