8:38 PM Saturday25 - April 2026
ಬ್ರೇಕಿಂಗ್ ನ್ಯೂಸ್
ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ…

ಇತ್ತೀಚಿನ ಸುದ್ದಿ

ವಿಶ್ವನಾಥ ಶೆಟ್ಟಿ ಪುತ್ರನ ಓದಿನ ಜವಾಬ್ದಾರಿ ವಹಿಸಿಕೊಂಡ ಅಶ್ವಿನಿ: ಹರ್ಷನ ಸಹೋದರಿಯಿಂದ ವಿಶಿಷ್ಟ ಕೊಡುಗೆ

01/04/2022, 19:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶಿವಮೊಗ್ಗದಲ್ಲಿ ಕೊಲೆಯಾದ ಭಜರಂಗ ದಳ ಕಾರ್ಯಕರ್ತ ಹರ್ಷನ ಸಹೋದರಿ 2015ರಲ್ಲಿ ಶಿವಮೊಗ್ಗದಲ್ಲಿ ಕೊಲೆಯಾಗಿದ್ದ ಮತ್ತೋರ್ವ ಹಿಂದೂ ಕಾರ್ಯಕರ್ತ ವಿಶ್ವನಾಥ್ ಶೆಟ್ಟಿ ಅವರ ಮಗ ಯಶಸ್ ಓದಿನ ಜವಾಬ್ದಾರಿಯನ್ನ ವಹಿಸಿಕೊಂಡಿದ್ದಾರೆ.

ಯಶಸ್ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ಮೃತ ವಿಶ್ವನಾಥ್ ಶೆಟ್ಟಿ ಪತ್ನಿಯ ತಾಯಿಯ ಜೊತೆ ಇದ್ದು, ಕೊಪ್ಪದಲ್ಲೇ 8ನೇ ತರಗತಿ ಓದುತ್ತಿದ್ದಾನೆ. 2015ರ ಫೆಬ್ರವರಿ 19ರಂದು ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪ ದುಷ್ಕರ್ಮಿಗಳು ವಿಶ್ವನಾಥ್ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಸಾವಿನ ಕೆಲ ತಿಂಗಳ ಬಳಿಕ ಪತ್ನಿ ಕೂಡ ಸಾವನ್ನಪ್ಪಿದ್ದರು. ವಿಶ್ವನಾಥ್ ಶೆಟ್ಟಿಯ ಮಗ ಯಶಸ್ ಅಪ್ಪ-ಅಮ್ಮ ಇಬ್ಬರೂ ಇಲ್ಲದೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಅಜ್ಜಿಯ ಜೊತೆ ವಾಸವಿದ್ದನು. ಇಂದು ಅವರ ಮನೆಗೆ ಭೇಟಿ ನೀಡಿದ ಮೃತ ಹರ್ಷ ಸಹೋದರಿ ಅಶ್ವಿನಿ ಆ ಬಾಲಕ ಓದಿನ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅವನ ಓದಿನ ಜೊತೆ ಬೇರೆ ಯಾವುದೇ ರೀತಿಯ ಸಮಸ್ಯೆ ಇದ್ದರೂ ನಾನೇ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. ನಿಮಗೆ ಏನಾದರೂ ಬೇಕಾದರೆ ನನಗೆ ಕರೆ ಮಾಡಿ. ಅಜ್ಜಿ ಹಾಗೂ ಯಶಸ್ ಅವರ ಇಬ್ಬರ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ. ವಿಶ್ವನಾಥ್ ಶೆಟ್ಟಿ ಪತ್ನಿಯ ತಂಗಿ ಕೂಲಿ ಕೆಲಸ ಮಾಡಿಕೊಂಡು ಯಶಸ್ ಹಾಗೂ ಅಜ್ಜಿಯನ್ನ ನೋಡಿಕೊಳ್ಳುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು