ಇತ್ತೀಚಿನ ಸುದ್ದಿ
ವಿಟ್ಲ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು; ಒಬ್ಬ ಗಂಭೀರ
14/09/2023, 22:23
ಸಾಂದರ್ಭಿಕ ಚಿತ್ರ
ವಿಟ್ಲ(reporterkarnataka.com): ಇಲ್ಲಿಗೆ ಸಮೀಪದ ಕುದ್ದುಪದವು ಎಂಬಲ್ಲಿ ಅಜ್ಜಿ ಮನೆಯಲ್ಲಿದ್ದ ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವನೆ ಮಾಡಿದ ಸಹೋದರರು ಎಂದು ತಿಳಿದು ಬಂದಿದೆ.
ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ಇನ್ನೋರ್ವನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇವರಿಬ್ಬರು ಅಜ್ಜಿ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.














