1:32 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ವಿಟ್ಲ: 9ನೇ ತರಗತಿಯ ಅಪ್ರಾಪ್ತ ಬಾಲಕಿ ಆತ್ಮಹತ್ಯೆಪ್ರಕರಣ; ಆರೋಪಿ ಯುವಕನ ಬಂಧನ

06/05/2022, 21:12

ಬಂಟ್ವಾಳ(reporterkarnataka.com): ಇಲ್ಲಿನ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಕಾಣಿಯೂರು ನಿವಾಸಿ 14 ವರ್ಷದ 9ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಾಹುಲ್ ಹಮೀದ್ (30)ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ತನ್ನ ಮನೆಯಲ್ಲಿವ ಬುಧವಾರ ಶವವಾಗಿ ಪತ್ತೆಯಾಗಿದ್ದಳು.

ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದು, ಹೆತ್ತವರು ಆಗಮಿಸಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ಪೋಷಕರು ಕೆಲಸದ ನಿಮಿತ್ತ ಮತ್ತು ಆಕೆಯ ಸಹೋದರ ಔಷಧಿ ತರಲು ಹೊರಗೆ ಹೋಗಿದ್ದರು.

ಕೆಲಸ ನಿಮಿತ್ತ ಹೊರಗೆ ಹೋಗಿದ್ದ ಆಕೆಯ ಪೋಷಕರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮನೆಗೆ ಹಿಂತಿರುಗಿದಾಗ ಮಗಳು ಮಲಗುವ ಕೋಣೆಯ ಮೇಲ್ಛಾವಣಿಯಲ್ಲಿ ನೇಣು ಬಿಗಿದಿರುವುದನ್ನು ಕಂಡು ಬಂದಿತ್ತು.

ಹೆತ್ತವರು ಇತ್ತೀಚೆಗೆ ತಮ್ಮ ಮಗಳ ಮೊಬೈಲ್ ಫೋನ್ ಪರಿಶೀಲಿಸಿದಾಗ ಆಕೆ 30 ವರ್ಷದ ಸಾಹುಲ್ ಹಮೀದ್ ಎಂಬಾತನನ್ನು ಪ್ರೀತಿಸುತ್ತಿರುವ ವಿಷಯ ಬೆಳಕಿಗೆ ಬಂದಿತ್ತು.

ಹಮೀದ್ ಜೊತೆಗಿನ ಸಂಬಂಧವನ್ನು ಮುರಿಯುವಂತೆ ಮಗಳನ್ನು ಕೇಳಿಕೊಂಡಿದ್ದಾರೆ. ಅಲ್ಲದೇ ಹಮೀದ್ ನನ್ನು ಭೇಟಿಯಾಗಿ ಮಗಳ ಜತೆಗಿನ ಸಂಬಂಧವನ್ನು ಮುಂದುವರಿಸದಂತೆ ಕೇಳಿಕೊಂಡಿದ್ದಾರೆ. ಆದರೆ ಹಮೀದ್ ಕೇಳಲಿಲ್ಲ ಮತ್ತು ಸಂಬಂಧವನ್ನು ಮುಂದುವರಿಸಲು ಮಗಳನ್ನು ಪೀಡಿಸುತ್ತಿದ್ದನು. ಸಂಬಂಧವನ್ನು ಮುಂದುವರಿಸಲು ಉದ್ದೇಶಿಸದಿದ್ದರೆ ಜೀವನವನ್ನು ಕೊನೆಗೊಳಿಸುವಂತೆ ಹಮೀದ್ ಬಾಲಕಿಗೆ ತಾಕೀತು ಮಾಡಿದ್ದ ಎಂದು ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದರು.

ವಿಟ್ಲ ಪೊಲೀಸರು ಇದೀಗ ಆರೋಪಿ ಹಮೀದ್ ನನ್ನು ಬಂಧಿಸಿದ್ದಾರೆ.ಹಮೀದ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 305 ( ಅಪ್ರಾಪ್ತೆಯ ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಬಲಿಪಶು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಹಮೀದ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (2) (v) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು