1:56 PM Wednesday23 - April 2025
ಬ್ರೇಕಿಂಗ್ ನ್ಯೂಸ್
Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ…

ಇತ್ತೀಚಿನ ಸುದ್ದಿ

ವಿಟ್ಲ: 9ನೇ ತರಗತಿಯ ಅಪ್ರಾಪ್ತ ಬಾಲಕಿ ನೇಣಿಗೆ ಶರಣು; ಪ್ರೀತಿಸಲು ಒತ್ತಾಯಿಸುತ್ತಿದ್ದ ಯುವಕನ ವಿರುದ್ಧ ಕೇಸು

05/05/2022, 10:16

ಬಂಟ್ವಾಳ(reporterkarnataka.com): ಇಲ್ಲಿನ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಕಾಣಿಯೂರು ನಿವಾಸಿ 14 ವರ್ಷದ 9ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ.

ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದು, ಹೆತ್ತವರು ಆಗಮಿಸಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ಪೋಷಕರು ಕೆಲಸದ ನಿಮಿತ್ತ ಮತ್ತು ಆಕೆಯ ಸಹೋದರ ಔಷಧಿ ತರಲು ಹೊರಗೆ ಹೋಗಿದ್ದರು ಎಂದು ತಿಳಿದು ಬಂದಿದೆ.

ಕೆಲಸ ನಿಮಿತ್ತ ಹೊರಗೆ ಹೋಗಿದ್ದ ಆಕೆಯ ಪೋಷಕರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮನೆಗೆ ಹಿಂತಿರುಗಿದಾಗ ಮಗಳು ಮಲಗುವ ಕೋಣೆಯ ಮೇಲ್ಛಾವಣಿಯಲ್ಲಿ ನೇಣು ಬಿಗಿದಿರುವುದನ್ನು ಕಂಡು ಬಂತು.

ಹೆತ್ತವರು ಇತ್ತೀಚೆಗೆ ತಮ್ಮ ಮಗಳ ಮೊಬೈಲ್ ಫೋನ್ ಪರಿಶೀಲಿಸಿದಾಗ ಆಕೆ 30 ವರ್ಷದ ಸಾಹುಲ್ ಹಮೀದ್ ಎಂಬಾತನನ್ನು ಪ್ರೀತಿಸುತ್ತಿರುವ ವಿಷಯ ಬೆಳಕಿಗೆ ಬಂತು ಎಂದು ಆಕೆಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಹಮೀದ್ ಜೊತೆಗಿನ ಸಂಬಂಧವನ್ನು ಮುರಿಯುವಂತೆ ಮಗಳನ್ನು ಕೇಳಿಕೊಂಡಿದ್ದಾರೆ. ಅಲ್ಲದೇ ಹಮೀದ್ ನನ್ನು ಭೇಟಿಯಾಗಿ ಮಗಳ ಜತೆಗಿನ ಸಂಬಂಧವನ್ನು ಮುಂದುವರಿಸದಂತೆ ಕೇಳಿಕೊಂಡಿದ್ದಾರೆ. ಆದರೆ ಹಮೀದ್ ಕೇಳಲಿಲ್ಲ ಮತ್ತು ಸಂಬಂಧವನ್ನು ಮುಂದುವರಿಸಲು ಮಗಳನ್ನು ಪೀಡಿಸುತ್ತಿದ್ದನು. ಸಂಬಂಧವನ್ನು ಮುಂದುವರಿಸಲು ಉದ್ದೇಶಿಸದಿದ್ದರೆ ಜೀವನವನ್ನು ಕೊನೆಗೊಳಿಸುವಂತೆ ಹಮೀದ್ ಬಾಲಕಿಗೆ ತಾಕೀತು ಮಾಡಿದ್ದ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

ಅವರ ದೂರಿನ ಮೇರೆಗೆ ವಿಟ್ಲ ಪೊಲೀಸರು ಹಮೀದ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 305 ( ಅಪ್ರಾಪ್ತೆಯ ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಬಲಿಪಶು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಹಮೀದ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (2) (v) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು