2:08 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ವಿಟ್ಲ ಪಂಚಲಿಂಗೇಶ್ವರ ದೇವರ ಅವಭೃತ ಸ್ನಾನಘಟ್ಟಕ್ಕೆ ಕಾಯಕಲ್ಪ: ಬಂಟ್ವಾಳ ಶಾಸಕರ ನಿಧಿಯಿಂದ ವಿಶೇಷ ಕೊಡುಗೆ

25/01/2023, 10:22

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka.com

ಸಣ್ಣ ನೀರಾವರಿ ಇಲಾಖೆ ಮೂಲಕ 45 ಲಕ್ಷ ವೆಚ್ಚದಲ್ಲಿ ಬಂಟ್ವಾಳ ಶಾಸಕರ ವಿಶೇಷ ಪ್ರಯತ್ನದ ಮೂಲಕ ನಿರ್ಮಾಣವಾದ ವಿಟ್ಲಪಡ್ನೂರು ಗ್ರಾಮದ ಮೂರ್ಕಜೆ ಕೊಡಂಗಾಯಿ ಪಂಚತೀರ್ಥದಲ್ಲಿ ಪಂಚಲಿಂಗೇಶ್ವರ ದೇವರ ಅವಬ್ರತ ಸ್ನಾನ ಘಟ್ಟ ಲೋಕಾರ್ಪಣೆಗೊಂಡಿತು.


ಸ್ನಾನಘಟದಲ್ಲಿ ಬೆಳಗೆ ಗಂಗಾ ಪೂಜೆ ಹಾಗೂ ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್ ದೀಪ ಬೆಳಗಿಸಿ ಲೋಕಾರ್ಪಣೆ ಮಾಡಿದರು. ವಿಟ್ಲ ಸೀಮೆಗೆ ಸಂಬಂಧಿಸಿದ ಕೊಡಂಗಾಯಿ ನದಿಯ ನೀರು ಕಸಕಡ್ಡಿಗಳಿಂದ ಕಲುಷಿತಗೊಂಡಿದ್ದು, ಶಾಸಕರ ವಿಶೇಷ ಪ್ರಯತ್ನದ ಫಲವಾಗಿ ತಡೆಗೋಡೆ ನಿರ್ಮಾಣ ಹಾಗೂ ಮೆಟ್ಟಿಲುಗಳನ್ನು ನಿರ್ಮಾಣ ಮಾಡಿ ನದಿಯಲ್ಲಿ ಸ್ನಾನಘಟ್ಟವನ್ನು ನಿರ್ಮಾಣ ಮಾಡಲಾಗಿದೆ. ಈ ಭಾಗದ ಜನರ ಜೊತೆಗೆ ಭಕ್ತರಿಗೆ ಅನುಕೂಲವಾಗುವಂತೆ ಜೊತೆಗೆ ಇದೇ ನದಿಗೆ ಶಾಸಕರ ಅನುಮಾನದ ಮೂಲಕ ಕೃಷಿ ಹಾಗೂ ಜಲವೃದ್ದಿಗಾಗಿ ಕಿಂಡಿಅಣೆಕಟ್ಟು ನಿರ್ಮಾಣದ ಕಾರ್ಯ ಅಂತಿಮವಾಗಿದ್ದು, ಮುಂದಿನ ದಿನಗಳಲ್ಲಿ ಕೃಷಿಕರು ಇದರ ಸದುಪಯೋಗ ಪಡೆಯಲು ಅನುಕೂಲವಾಗಿದೆ.

ಸಭೆಯ ಅಧ್ಯಕ್ಷತೆಯನ್ನು ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ರೇಷ್ಮಾ ಶಂಕರಿ ಬಲಿಪಗುಳಿ ವಹಿಸಿದರು. ವೇದಿಕೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೀತಾರಾಮ ಕೆದಿಲಾಯ,
ಅಜಯ ಟ್ರಸ್ಟಿನ ಸದಸ್ಯರಾದ ರವೀಂದ್ರ ಪುಣಚ, ಕಟ್ಟೆ ಸಮಿತಿಯ ಅಧ್ಯಕ್ಷ ಮಂಜಯ್ಯ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವೀಶ ಶೆಟ್ಟಿ ಕರ್ಕಳ, ಹಾಗೂ ಸಭೆಯಲ್ಲಿ ಮೈತ್ರಿ ಗುರುಕುಲ ಬಳಗ, ಗ್ರಾಮ ಪಂಚಾಯತಿ ಸದಸ್ಯರು, ಕಟ್ಟೆ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು