4:54 AM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ವಿವೇಕಾನಂದ ಶಿಶು ಮಂದಿರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಆರಂಭ

08/12/2024, 19:59

ಪುತ್ತೂರು(reporterkarnataka.com): ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ ಶುಕ್ರವಾರ ದೇವಾಲಯಗಳ ಸಂವರ್ಧನ ಸಮಿತಿ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯನ್ನು, ಆರಂಭಿಸಲಾಯಿತು.
ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ಹಿಂದೂ ಧಾರ್ಮಿಕ ಶಿಕ್ಷಣದ ಉದ್ದೇಶ ಮತ್ತು ಅದರ ವಿಶೇಷತೆಗಳನ್ನು ತಿಳಿಸಿದರು. ಬಳಿಕ ಶ್ಲೋಕವೊಂದರ ಅರ್ಥ, ದೈನಂದಿನ ಜೀವನದಲ್ಲಿ ಆಚಾರ – ವಿಚಾರಗಳು ವೈಜ್ಞಾನಿಕ ತಳಹದಿ ಮೇಲೆ ಪರಂಪರಾಗತವಾಗಿ ಹೇಗೆ ರೂಪುಗೊಂಡಿವೆ ಎಂಬುದನ್ನು ವಿವರಿಸಿ, ಭಜನೆಯನ್ನು ನಡೆಸಿಕೊಟ್ಟರು.

ಶಂಕರಿ ಶರ್ಮ ಅವರು ಕನ್ನಡದ ಭಗವದ್ಗೀತೆ ಎನಿಸಿಕೊಂಡಿರುವ ಡಿ.ವಿ.ಜಿ.ಯವರ ಕಗ್ಗವೊಂದನ್ನು ಪ್ರಸ್ತುತಪಡಿಸಿದರು. ಮುಂದೆ, ಅದರ ಅರ್ಥವನ್ನು ವಿವರಿಸುತ್ತಾ ಇಂದಿನ ಕಾಲಘಟ್ಟದಲ್ಲಿ ಅದರ ಅಗತ್ಯತೆಯನ್ನು ತಿಳಿಸಿದರು. ಬಳಿಕ ಪೌರಾಣಿಕ ಕಥೆಯೊಂದನ್ನು ಹೇಳಿ, ಅದರ ವಿಶೇಷತೆಯನ್ನು ವಿವರಿಸಿದರು.
ಶಿಶುಮಂದಿರದ ಆಡಳಿತ ಮಂಡಳಿಯಲ್ಲಿ ಕೋಶಾಧಿಕಾರಿಯಾಗಿರುವ
ಚಂದ್ರಪ್ರಭಾ ಅವರು ಭಗವದ್ಗೀತೆಯ ಮಹತ್ವವನ್ನು ತಿಳಿಸಿದರು. ಮಾತೃಭಾರತಿ ಸದಸ್ಯೆಯರಾದ ಲಕ್ಷ್ಮೀಪ್ರಭ ಸ್ವಾಗತಿಸಿ, ರಮ್ಯ ಧನ್ಯವಾದ ಸಮರ್ಪಿಸಿದರು. ಮುಖ್ಯಮಾತಾಜಿ ರೇಖಾ ಕುಮಾರಿ, ಮಾತಾಜಿಯವರಾದ ಹರ್ಷಿತಾ, ದಿವ್ಯ ಮತ್ತು ಪದ್ಮಪ್ರಿಯ, ಪೋಷಕರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು