11:10 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ವಿವೇಕ ಸಪ್ತಾಹ: ಮಂಗಳೂರಿನಲ್ಲಿ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮ

15/01/2022, 01:16

ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು ವಿವೇಕ ಸಪ್ತಾಹದ ಪ್ರಯುಕ್ತ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮ ಶುಕ್ರವಾರ ಕೆನರಾ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.





ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಪೊಲೀಸ್ ಕಮಿಷನರ್
ಶಶಿಕುಮಾರ್ ನೆರವೇರಿಸಿ ದುಶ್ಚಟಗಳಿಗೆ ಬಲಿಯಾಗದಂತೆ ವಿದ್ಯಾರ್ಥಿ ಜೀವನವನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ಮನದಟ್ಟು ಮಾಡಿದರು.

ಮುಖ್ಯ ಅತಿಥಿಯಾಗಿ, ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ ಮಾತನಾಡಿ ಮಾದಕ ದ್ರವ್ಯದ ವ್ಯಾಸನಿಗಳಾಗಿ ಮುಂದಿನ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ವಿವೇಕಾನಂದರು ರಾಷ್ಟ್ರದ ಶಕ್ತಿಯೇ ಯುವಕರು ಎಂದು ಅವರು ಹೇಳಿದ್ದರು.. ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಗೊಂಡು ಮಾದಕ ವಸ್ತುಗಳ ದಾಸರಾಗದೆ ಉತ್ತಮ ಜೀವನವನ್ನು ರೂಪಿಸಿಕೊಳ್ಳಿ.ಎಂದು ಅವರು ಹೇಳಿದರು.

ಕೆನರಾ ಹೈಸ್ಕೂಲ್ ಅಸೋಶಿಯೇಷನ್ ಪರ್ಯಾಯ ಖಜಾಂಜಿ ಪುರುಷೋತ್ತಮ,ಕೆನರಾ ಕಾಲೇಜಿನ ರಾ. ಸೆ. ಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು,ವಾಣಿ.ಯು.ಎಸ್ ಉಪಸ್ಥಿತರಿದ್ದರು.


ಸಮಾಪನ್ಮೂಲ ವ್ಯಕ್ತಿ ಯಾಗಿ, ಫಾದರ್ ಮುಲ್ಲರ್ ಆಸ್ಪತ್ರೆಯ ಮಾನಸಿಕ ವಿಭಾಗದ ಡಾ.ಅವಿನಾಶ್ ಜಾಯಿ ಮಾದಕ ದ್ರವ್ಯದ ವ್ಯಸನದಿಂದ ಅರೋಗ್ಯದ ಮೇಲಾಗುವ ದುಷ್ಪಾರಿಣಾಮದ ಬಗ್ಗೆ
ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೇಮಲತಾ.ವಿ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು