ಇತ್ತೀಚಿನ ಸುದ್ದಿ
ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್ 1ರಿಂದ ರಾಜ್ಯದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ
25/02/2023, 21:38
ಮಂಗಳೂರು(reporterkarnataka.com): ವೇತನ ಭತ್ತೆ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಮಹಾನಗರಪಾಲಿಕೆ ನೌಕರರ ಸಂಘದ ವತಿಯಿಂದ ಮಾ. 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದೆ.
ರಾಜ್ಯ ಸರಕಾರಿ ನೌಕರರ ಸಂಘದ ಸಭೆಯ ನಿರ್ಣಯದಂತೆ ಈ ಮುಷ್ಕರ ನಡೆಯಲಿದೆ. ಮಹಾನಗರ ಪಾಲಿಕೆ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಅದಷ್ಟು ಬೇಗ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನ ಅನುಷ್ಠಾನಕ್ಕೆ ತರಬೇಕು, ಕರ್ನಾಟಕದಲ್ಲಿಯೂ ಎನ್ ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು, ಪಾಲಿಕೆ ಅಧಿಕಾರಿ, ನೌಕರರ ನೇಮಕಾತಿ ನಿಯಮಾವಳಿ ಅಧಿಸೂಚನೆ ಪ್ರಕಟಿಸಬೇಕು,ಆರೋಗ್ಯ ಸಂಜೀವಿನಿ ಜಾರಿ ಸೇರಿ ಇತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಂಘದ ಅಧ್ಯಕ್ಷ ಎ. ಅಮೃತರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.