5:55 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ: ಮೊಹಮ್ಮದ್ ಶರೀಫ್ ಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ

12/08/2023, 19:50

ಕಾರ್ಕಳ(reporterkarnataka.com):ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫ ಅವರು ಸಾಮಾಜಿಕ, ಮಾಧ್ಯಮ ಹಾಗೂ ಶೈಕ್ಷಣಿಕ,ಕ್ಷೇತ್ರದಲ್ಲಿ ಅಪಾರವಾದ ಕೊಡುಗೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶ್ರೀನಿಧಿ ಫೌಂಡೇಶನ್ (ರಿ) ಕರ್ನಾಟಕ ಹಾಗೂ
ನಮ್ಮವರಿಗಾಗಿ ನಮ್ಮ ಧ್ವನಿ ಸಮಾಜಮುಖಿ ಸೇವಾ ಸಂಘ (ರಿ) ಕರ್ನಾಟಕ ಇವರ ಸಹಯೋಗದಲ್ಲಿ ನೀಡುವ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಬೆಂಗಳೂರಿನ ರವೀಂದ್ರ ಕಲಾ ಮಂಟಪದಲ್ಲಿ ನಡೆಯುವ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಮೊಹಮ್ಮದ್ ಶರೀಫ್ ಅವರಿಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು