7:35 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ’: ಏಪ್ರಿಲ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮೇಘನಾ ರಾವ್ ಹಾಗೂ ದೀಕ್ಷ್ಣಕಲ್ಮಾಡಿ ಆಯ್ಕೆ

07/05/2022, 17:45

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಏಪ್ರಿಲ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮೇಘನಾ ವಿ. ರಾವ್ ಹಾಗೂ ದೀಕ್ಷ್ಣಎನ್ . ಕಲ್ಮಾಡಿ ಆಯ್ಕೆಗೊಂಡಿದ್ದಾರೆ.

ಪಾಣೆಮಂಗಳೂರು ನಿವಾಸಿಯಾದ ವೆಂಕಟೇಶ್ ರಾವ್ ಬಿ. ಹಾಗೂ ರಶ್ಮಿ ವಿ. ರಾವ್ ಅವರ ಪುತ್ರಿಯಾದ ಮೇಘನಾ 7ನೇ ತರಗತಿಯ ವಿದ್ಯಾರ್ಥಿನಿ. ಬಂಟ್ವಾಳದ ಎಸ್. ವಿ.ಎಸ್. ಸ್ಕೂಲ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದಾಳೆ.
ಸಂಗೀತ, ಚಿತ್ರಕಲೆ, ಡ್ಯಾನ್ಸ್ ನಲ್ಲಿ ಆಸಕ್ತಿ ಹೊಂದಿದ್ದಾಳೆ. ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಆಗಿದ್ದು ಸೀನಿಯರ್ ಕಲಿಯುತ್ತಿದ್ದಾಳೆ. ಗುರುಗಳು ವಿದ್ವಾನ್ ಕೃಷ್ಣ ಆಚಾರ್ಯ ಮತ್ತು ರಜತ ಆಚಾರ್ಯ ಅವರು ಮೇಘನಾಳ ಗುರುಗಳು.
ಸುಗಮ ಸಂಗೀತವನ್ನು ಯಶು ಸ್ನೇಹ ಗಿರಿ ಅವರ ಬಳಿ ಕಲಿಯುತ್ತಿದ್ದಾಳೆ. ಪ್ರತಿಭಾ ಕಾರಂಜಿಯಲ್ಲಿ ನಾಲ್ಕನೇ ತರಗತಿಯಲ್ಲಿ ತಾಲೂಕು ಮಟ್ಟದ ವರೆಗೆ ಹೋಗಿರುತ್ತಾಳೆ. ಸೂಕ್ತ ನ್ಯೂಸ್ ಆಯೋಜಿಸಿರುವ ಗಾನಸಿರಿ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಚಿನ್ನರ ಲೋಕ ಟ್ರಸ್ಟ್ ಆಯೋಜಿಸಿರುವ ಕರಾವಳಿ ಸರಿಗಮಪ ಸ್ಪರ್ಧೆಯಲ್ಲಿ(2021) ಸೆಮಿಫೈನಲಿಸ್ಟ್ ಆಗಿದ್ದಳು. ವಾಯ್ಸ್ ಆಫ್ ಕಲಾಂಜಲಿ ಜೂನಿಯರ್ ಆಡಿಷನ್ ನಲ್ಲಿ ಸೆಲೆಕ್ಟ್ ಆಗಿ ಮುಂದಿನ ಭಾಗಕ್ಕೆ ಆಯ್ಕೆಯಾಗಿದ್ದಾಳೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಡೆಸಿದ ಜೋಕುಲೆನ ತುಳು ಪದ ರಂಗಿತ ಪಂತ ದಲ್ಲಿ ಪ್ರಥಮ ಬಹುಮಾನವನ್ನು ಪಡೆದಿರುತ್ತಾಳೆ. ಮುಳಿಯ ಗಾನ ರಥ 2021 ಕಾರ್ಯಕ್ರಮದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಮುಂದಿನ ಸುತ್ತಿಗೆ ಆಯ್ಕೆಯಾಗಿರುತ್ತಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು