2:06 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಮತಗಳ್ಳತ; ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

08/08/2025, 18:45

*ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ: ಸಿಎಂ ಸಿದ್ದರಾಮಯ್ಯ*

*ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ: ಸಿಎಂ*

ಬೆಂಗಳೂರು(reporterkarnataka.com): ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.
ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ
ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ ಎಂದು ವಿವರಿಸಿದರು.
ಚುನಾವಣಾ ಆಯೋಗ ಸಂವಿಧಾನದಡಿಯಲ್ಲಿ ನ್ಯಾಯಬದ್ದವಾಗಿ ನಡೆದುಕೊಳ್ಳಬೇಕು. ಸಂವಿಧಾನ ಕೊಟ್ಟಿರುವ ಮತದಾನದ ಮೂಲಭೂತ ಹಕ್ಕನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ದೇಶದ ಜನತೆ ಅವಕಾಶ ಕೊಡುವುದಿಲ್ಲ ಎಂದರು.
ಮನುವಾದಿಗಳು ಸಂವಿಧಾನ ವಿರೋಧಿಗಳು. ಇವರು ಸಂವಿಧಾನದ ಪ್ರಕ್ರಿಯೆಯನ್ನೇ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ವಂಚನೆ ಕಾರಣದಿಂದ ಸೆಂಟ್ರಲ್ ಲೊಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದೆಯೇ ಹೊರತು ಜನಾಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು ಎನ್ನುವುದು ಈಗ ಗೊತ್ತಾಗಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 14 ಸೀಟುಗಳನ್ನು ಗೆಲ್ಲಬೇಕಿತ್ತು. ಆದರೆ ಮತಕಳ್ಳತನದ ಕಾರಣದಿಂದ ನಾವು ಸೋತಿದ್ದೇವೆ. EVM ಬಂದ ಮೇಲೆ ಇವನ್ನು ದುರುಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿರುವುದು ಈಗ ದಾಖಲೆ ಸಮೇತ ಸಿಕ್ಕಿಬಿದ್ದಿದ್ದಾರೆ ಎಂದರು.
ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ. ಇದಕ್ಕೆ ಇಡೀ ರಾಜ್ಯದ ಜನತೆ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ಘೋಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು