3:51 AM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ವೃದ್ಧ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ; ಮಾನವೀಯತೆ ಮರೆತು ಗುಂಡಿಗೆಸೆದು ಕೊಲೆಗೈದ ಶಂಕೆ

22/04/2023, 11:44

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.ಕಾಂ

ಬೆಳಗಾವಿ ಜಿಲ್ಲೆಯ ಅಥಣಿ-ಖಿಳೆಗಾಂವ ರಾಜ್ಯ ಹೆದ್ದಾರಿಯ ಸಂಬರಗಿ ಗ್ರಾಮದ ಜಂಬಗಿ ಸೀಮೆ ಸಮೀಪ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವೃದ್ಧರೊಬ್ಬರನ್ನು ಗುಂಡಿಗೆ ಎಸೆದು ಕೊಲೆ ಮಾಡಿ ಪರಾರಿಯಾದ ಅಮಾನವೀಯ ಘಟನೆ ನಡೆದಿದೆ. ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಹೊರವಲಯದಲ್ಲಿ ಬಾವಿಯಲ್ಲಿ ವೃದ್ಧರ ಶವ ಪತ್ತೆಯಾಗಿದೆ.
ಮೃತರನ್ನು ಅಪ್ಪಣ್ಣ ಸಿದ್ರಾಯ ಕೋಳಿ (85) ಎಂದು ಗುರುತಿಸಲಾಗಿದೆ. ಅಪ್ಪಣ್ಣ ಅವರು ಮನೆಯಿಂದ ಸಂಬಂಧಿಕರ ಮನೆಗೆ ತೆರಳುವಾಗ ಅಪರಿಚಿತ ವಾಹನವೊಂದು ವೇಗದಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಅಪ್ಪಣ್ಣ ತೀವ್ರ ಗಾಯಗೊಂಡಿದ್ದು, ನಂತರ ಅವರನ್ನು ಸುಮಾರು 200 ಅಡಿ ಅಂತರದಲ್ಲಿರುವ ಗುಂಡಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು