8:11 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ವ್ಯಕ್ತಿತ್ವ ವಿಕಸನಕ್ಕೆ ಅಡ್ಡಿಯಾಗಿರುವ ಕೀಳರಿಮೆ, ಮೇಲರಿಮೆ ಎಂಬ ವೈರಸ್‌ ತೊಲಗಿಸಿ: ಡಾ.ಪೂರ್ಣಿಮಾ ಜೋಗಿ

26/09/2022, 23:45

ಮೂಡುಬಿದ್ರೆ(reporterkarnataka.com): ವ್ಯಕ್ತಿತ್ವ ವಿಕಸನಕ್ಕೆ ಅಡ್ಡಿಯಾಗಿರುವ ಕೀಳರಿಮೆ ಮತ್ತು ಮೇಲರಿಮೆ ಎಂಬ ವೈರಸ್‌ನ್ನು ದೂರ ಮಾಡಬೇಕಾದರೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಸದೃಢ ರಾಜ್ಯ ದೇಶ ಕಟ್ಟಲು ವಿದ್ಯಾರ್ಥಿಗಳು ಪಣ ತೊಡಬೇಕು ಎಂದು ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಅನುಷ್ಠಾನ ಅಧಿಕಾರಿ ಡಾ.ಪೂರ್ಣಿಮಾ ಜೋಗಿ ಹೇಳಿದರು.


ಮೂಡುಬಿದ್ರೆಯ ಆಳ್ವಾಸ್ ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಶಿವರಾಮ ಕಾರಂತ ಸಭಾಂಗಣದಲ್ಲಿ ಆಯೋಜಿಸಿದ್ದ ‘ರಾಷ್ಟ್ರೀಯ ಸೇವಾ ಯೋಜನಾ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ತಮ್ಮಆಂತರಿಕ ಶಕ್ತಿಯನ್ನು ಅರಿಯಲು ರಾಷ್ಟ್ರೀಯ ಸೇವಾ ಯೋಜನೆಯು ಒಂದು ಉತ್ತಮ ವೇದಿಕೆಯಾಗಿದ್ದು, ಅದನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ. ಪೂರ್ಣಿಮಾ ಜೋಗಿ ನುಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ನಿವೃತ್ತ ಅಧಿಕಾರಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ರಾಷ್ಟ್ರೀಯ ಸೇವಾ ಯೋಜನೆಯು ಧರ್ಮತೀತವಾಗಿದ್ದು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಿದೆ. ಸೇವಾ ಮನೋಭಾವವನ್ನೇ ಧೈಯವನ್ನಾಗಿಸಿದ ಎನ್ನೆಸ್ಸೆಸ್ ಪಾಲ್ಗೊಳ್ಳುವ ಮೂಲಕ ಸಮಾಜದ ಋಣ ಸಂದಾಯ ಮಾಡಲು ಸಾಧ್ಯ, ಜ್ಞಾನ, ಕೌಶಲ್ಯ, ದೈಹಿಕ ಆರೋಗ್ಯ ಹಾಗೂ ಜೀವನ ಒಳಗೊಂಡಿರುವ ಮೌಲ್ಯಗಳನ್ನು ಎನ್ನೆಸೆಸ್‌ನಲ್ಲಿ ವಿದ್ಯಾರ್ಥಿಗಳಿಗೆ ಪಠ್ಯದಷ್ಟೇ, ಪತ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡುತ್ತದೆ. ವಿದ್ಯಾರ್ಥಿಗಳು ರಚನಾತ್ಮಕವಾಗಿ ತೊಡಗಿಸಿ ಕೊಂಡಾಗ ರಾಷ್ಟ್ರ ರಾಜ್ಯ, ಜಿಲ್ಲೆ, ಸ್ಥಳೀಯ ಅಭಿವೃದ್ಧಿಗೂ ಪೂರಕವಾಗಲಿದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪೂರ್ವ ಕಾಲೇಜಿನ ಪ್ರೊ.ಮಹಮ್ಮದ್ ಸದಾಕತ್ ಮಾತನಾಡಿ, ವಿದ್ಯಾರ್ಥಿಗಳು ಎನ್ನೆಸ್ಸೆಸ್ ಮೂಲಕ ಕಲಿತ ಸಮಯದ ಸದುಪಯೋಗ, ಶಿಸ್ತು ಹಾಗೂ ಸೇವಾ ಮನೋಭಾವನೆ ಜೀವನದುದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ., ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ, ಪಿ.ಯು ಕಾಲೇಜಿನ ರಾ. ಸೆ.ಯೋ ಕಾರ್ಯಕ್ರಮ ಅಧಿಕಾರಿ ಅಂಬರೀಶ್ ಚಿಪುಲ್ನಾಕರ್ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾಯೋಜನಾ ಕಾರ್ಯಕ್ರಮ ಅಧಿಕಾರಿ ಶಾಲೆಟ್ ಮೋನಿಸ್ ಸ್ವಾಗತಿಸಿದರು. ವಿದ್ಯಾರ್ಥಿನಿ ಜಾಹ್ನವಿ ವಂದಿಸಿದರು. ಕೃತಿಕಾ, ಚಂದ್ರಾಧರ ಅತಿಥಿಗಳನ್ನು ಪರಿಚಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು