10:07 PM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಸೇಲ್

03/04/2026, 21:59

ಬೆಂಗಳೂರು(reporterkarnataka.com): ಮಧ್ಯಪ್ರಾಚ್ಯ ಯುದ್ದ ಇಡೀ ವಿಶ್ವವನ್ನೇ ಅಲುಗಾಡಿಸುತ್ತಿದೆ. ಪೆಟ್ರೋಲ್, ಡಿಸೇಲ್ ಸಿಗದೇ ಒದ್ದಾಡುತ್ತಿರುವ ಜನ ಇವಿ ವಾಹನಗಳ ಮೊರೆ ಹೋಗಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಮಾರಾಟವಾಗಿವೆ. ಯುದ್ಧದಿಂದಾಗಿ ಒಂದೆಡೆ ಜನ ಅಡುಗೆ ಮನೆಗೆ ಸಿಲಿಂಡರ್ ಸಿಗದೇ ಒದ್ದಾಡುತ್ತಿದ್ರೇ, ಮತ್ತೊಂದೆಡೆ ಪೆಟ್ರೋಲ್, ಡಿಸೇಲ್ ಸಿಗದೇ ವಾಹನದಲ್ಲಿ ಹಿಂದೂ ಮುಂದು ನೋಡುವಂತಾಗಿದೆ. ಹೀಗಾಗಿ ರಾಜ್ಯದ ಜನ ನಿಧಾನವಾಗಿ ಎಲೆಕ್ಟ್ರಿಕ್ ವೆಹಿಕಲ್ಸ್‌ನತ್ತ ಮುಖ ಮಾಡಿದ್ದು, ಕಳೆದ ಒಂದು ತಿಂಗಳಿನಿಂದ ಇವಿ ವೆಹಿಕಲ್ಸ್‌ಗಳ ಮಾರಾಟ, ಬುಕ್ಕಿಂಗ್ ಹೆಚ್ಚಾಗಿದೆ. ಇರಾನ್-ಇಸ್ರೇಲ್-ಅಮೇರಿಕಾ ಕದನಕ್ಕೆ ಸದ್ಯಕ್ಕೆ ವಿರಾಮ ಬೀಳುತ್ತಿಲ್ಲ. ಈ ದೀರ್ಘಕಾಲದ ಯುದ್ದದ ಪರಿಣಾಮ ರಾಜ್ಯದ ಮೇಲೆ ಬಿದ್ದಿದ್ದು ಜನಸಾಮಾನ್ಯರು ತತ್ತರಿಸುವಂತಾಗಿದೆ. ಪ್ರಮುಖವಾಗಿ ಪೆಟ್ರೋಲ್, ಡಿಸೇಲ್, ಸಿಎನ್‌ಜಿಗಾಗಿ ಕಿಲೋಮೀಟರ್‌ಗಟ್ಟಲೇ ಕ್ಯೂ ಹಚ್ಚಿ ನಿಲ್ಲೋ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಜನ ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಳೆದ ಮಾರ್ಚ್ 1ರಿಂದ 31ರವರೆಗೆ 28,765 ಎಲೆಕ್ಟ್ರಿಕ್ ವಾಹನಗಳು ರೆಜಿಸ್ಟ್ರೇಷನ್ ಆಗಿದ್ದು, ನಿಧಾನವಾಗಿ ಇವಿ ವೆಹಿಕಲ್ಸ್ಗಳನ್ನು ಕೊಳ್ಳುವುವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮೂಲಕ ಕಳೆದ ತಿಂಗಳವರೆಗೆ 7,56,637 ಎಲೆಕ್ಟ್ರಿಕ್ ವಾಹನಗಳು ರಾಜ್ಯದಲ್ಲಿ ಸಂಚರಿಸುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು