11:39 PM Wednesday20 - May 2026
ಬ್ರೇಕಿಂಗ್ ನ್ಯೂಸ್
ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ…

ಇತ್ತೀಚಿನ ಸುದ್ದಿ

ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

20/05/2026, 23:38

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಹಾಗೂ ‘ಮಾರ್ತಾಂಡ’ ಆನೆ ಬಲಿಯಾಗಿದೆ. ಶಿಬಿರದಲ್ಲಿ ಆನೆಗಳ ಸಂಖ್ಯೆ ಮಿತಿಗೊಳಿಸಲು ಮತ್ತು ಪ್ರವಾಸಿಗರಿಂದ ದೂರವಿಡಲು 2019ರಲ್ಲೇ ಹೈಕೋರ್ಟ್ ತಜ್ಞರ ಸಮಿತಿ ನೀಡಿದ್ದ ವರದಿ ಹಾಗೂ ಪ್ರಮುಖ ಶಿಫಾರಸುಗಳನ್ನು ಅರಣ್ಯ ಇಲಾಖೆ ಸಂಪೂರ್ಣ ನಿರ್ಲಕ್ಷಿಸಿದ್ದೇ ಈ ದಾರುಣ ದುರಂತಕ್ಕೆ ಕಾರಣ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಕೊಡಗು ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಎರಡು ದಿನಗಳ ಹಿಂದೆ (ಮೇ 18) ಆನೆಗಳ ನಡುವಿನ ಕಾದಾಟಕ್ಕೆ ಚೆನ್ನೈ ಮೂಲದ ಪ್ರವಾಸಿ ಮಹಿಳೆ ತುಳಸಿ (33) ಬಲಿಯಾಗಿದ್ದರು. ಇದರ ಬೆನ್ನಲ್ಲೇ, ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಎಂಬ ಸಾಕಾನೆ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಈ ದಾರುಣ ಘಟನೆಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿತನ ಮತ್ತು ತಜ್ಞರ ವರದಿಯ ಕಡೆಗಣನೆಯೇ ಮುಖ್ಯ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ.

*2019ರಲ್ಲೇ ಎಚ್ಚರಿಸಿದ್ದ ತಜ್ಞರ ಸಮಿತಿ*
ಹೈಕೋರ್ಟ್ ಆದೇಶದಂತೆ ವನ್ಯಜೀವಿ ತಜ್ಞ ಕೆ.ಎಂ. ಚಿಣ್ಣಪ್ಪ, ಪಶುವೈದ್ಯ ಸರ್ಜನ್ ಡಾ. ಕಲೈವಣ್ಣನ್ ಮತ್ತು ಮುಖ್ಯ ಪಶುವೈದ್ಯ ಡಾ. ಅಶ್ರಫ್ ಅವರನ್ನೊಳಗೊಂಡ ತಜ್ಞರ ಸಮಿತಿಯು ಕರ್ನಾಟಕದ ಎಲ್ಲಾ ಆನೆ ಶಿಬಿರಗಳಿಗೆ ಭೇಟಿ ನೀಡಿ 2019ರಲ್ಲೇ ಅರಣ್ಯ ಇಲಾಖೆಗೆ ಸಮಗ್ರ ವರದಿ ಸಲ್ಲಿಸಿತ್ತು. ಆದರೆ ಇಲಾಖೆ ಇದನ್ನು ಸಂಪೂರ್ಣವಾಗಿ ಕಡೆಗಣಿಸಿದೆ.

*ವರದಿಯಲ್ಲಿದ್ದ ಪ್ರಮುಖ ಅಂಶಗಳು ಮತ್ತು ಶಿಫಾರಸುಗಳು:*
ದುಬಾರೆ ಶಿಬಿರಕ್ಕೆ ಮಿತಿಮೀರಿ ಭೇಟಿ ನೀಡುವ ಪ್ರವಾಸಿಗರಿಂದಾಗಿ ಆನೆಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿವೆ. ಪ್ರವಾಸಿಗರ ಅತಿಯಾದ ಒಡನಾಟದಿಂದ ಆನೆಗಳ ನಡವಳಿಕೆಯಲ್ಲಿ ಅಪಾಯಕಾರಿ ಬದಲಾವಣೆಗಳಾಗುತ್ತಿವೆ ಎಂದು ಚಿತ್ರಸಹಿತ ವರದಿ ನೀಡಲಾಗಿತ್ತು. ಪ್ರವಾಸಿಗರನ್ನು ಆನೆಗಳ ತೀರಾ ಹತ್ತಿರಕ್ಕೆ ಬಿಡಬಾರದು ಮತ್ತು ಅವುಗಳಿಂದ ದೂರವಿಡಬೇಕು ಎಂದು ಸಮಿತಿ ಸ್ಪಷ್ಟವಾಗಿ ತಿಳಿಸಿತ್ತು. ಒಂದು ಶಿಬಿರದಲ್ಲಿ ಗರಿಷ್ಠ 15 ಆನೆಗಳಿಗಿಂತ ಹೆಚ್ಚು ಇರಬಾರದು ಎಂದು ಶಿಫಾರಸು ಮಾಡಲಾಗಿತ್ತು. ಆದರೆ, ಪ್ರಸ್ತುತ ದುಬಾರೆ ಶಿಬಿರದಲ್ಲಿ ನಿಯಮ ಮೀರಿ ಬರೋಬ್ಬರಿ 30 ಆನೆಗಳನ್ನು ಇರಿಸಲಾಗಿದೆ.
ಕಾವೇರಿ ನದಿಯಲ್ಲಿ ಆನೆಗಳಿಗೆ ಸ್ನಾನ ಮಾಡಿಸುವ ವೇಳೆ ‘ಕಂಜನ್’ ಮತ್ತು ‘ಮಾರ್ತಾಂಡ’ ಆನೆಗಳ ನಡುವೆ ದಿಢೀರ್ ಕಾದಾಟ ಆರಂಭವಾಗಿತ್ತು. ಕಂಜನ್ ದಾಳಿಗೆ ಸಿಲುಕಿ ಮಾರ್ತಾಂಡ ಆನೆ ನಿಯಂತ್ರಣ ತಪ್ಪಿ ನದಿ ದಂಡೆಯಲ್ಲಿದ್ದ ಪ್ರವಾಸಿಗರ ಮೇಲೆ ಬಿದ್ದಿತ್ತು. ಇದರ ಅಡಿಯಲ್ಲಿ ಸಿಲುಕಿದ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ಪತಿ ಮತ್ತು ಮಗು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. ಕಾದಾಟದಲ್ಲಿ ತೀವ್ರ ಆಂತರಿಕ ರಕ್ತಸ್ರಾವವಾಗಿ ಚಿಕಿತ್ಸೆ ಫಲಕಾರಿಯಾಗದೆ ಮಾರ್ತಾಂಡ ಆನೆಯೂ ಮೃತಪಟ್ಟಿದೆ. ತಜ್ಞರ ಸಮಿತಿಯ ವರದಿಯನ್ನು ಅರಣ್ಯ ಇಲಾಖೆ ಸಕಾಲದಲ್ಲಿ ಜಾರಿಗೊಳಿಸಿದ್ದರೆ ಈ ಅಮೂಲ್ಯ ಜೀವಗಳನ್ನು ಉಳಿಸಬಹುದಿತ್ತು ಎಂದು ಸಾರ್ವಜನಿಕರು ಹಾಗೂ ವನ್ಯಜೀವಿ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು