ಇತ್ತೀಚಿನ ಸುದ್ದಿ
ವಾಷಿಂಗ್ಟನ್ ತಲುಪಿದ ಪ್ರಧಾನಿ ಮೋದಿ:ಫ್ರಾಂಕ್‌ಫರ್ಟ್‌ನಲ್ಲಿ ಇಳಿಯದೇ ದೀರ್ಘ ಹಾರಾಟ!; 3 ದಿನಗಳ ಅಮೆರಿಕ ಪ್ರವಾಸ
23/09/2021, 15:59
ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಮೆರಿಕ ಭೇಟಿಗಾಗಿ ಗುರುವಾರ ವಾಷಿಂಗ್ಟನ್ ಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ದೆಹಲಿಯಿಂದ ನೇರವಾಗಿ ವಾಷಿಂಗ್ಟನ್ ಡಿಸಿ ತಲುಪಿರುವುದು ವಿಶೇಷವಾಗಿದೆ.
ದೆಹಲಿಯಿಂದ ವಾಷಿಂಗ್ಟನ್‌ಗೆ ಸಾಮಾನ್ಯವಾಗಿ15 ತಾಸು ಪ್ರಯಾಣ ಮಾಡಬೇಕಾಗುತ್ತದೆ. ವಿಮಾನ ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿ ಲ್ಯಾಂಡಿಂಗ್ ಆಗುತ್ತಿತ್ತು. ಫ್ರಾಂಕ್‌ಫರ್ಟ್‌ನಲ್ಲಿ ಇಂಧನ ತುಂಬಿಸಿಕೊಳ್ಳಲಾಗುತ್ತಿತ್ತು. ಆದರೆ ಈ ಬಾರಿ ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ವಿಮಾನ ಫ್ರಾಂಕ್‌ಫರ್ಟ್‌ನಲ್ಲಿ ಭೂಸ್ಪರ್ಶ ಮಾಡಿಲ್ಲ. ಬದಲಿಗೆ ದೆಹಲಿಯಿಂದ ನೇರವಾಗಿ ವಾಷಿಂಗ್ಟನ್ ಡಿಸಿಯಲ್ಲಿ ಬಂದು ಇಳಿದಿದೆ.
ಪ್ರಧಾನಿ ಮೋದಿ ಪ್ರಯಾಣಿಸಿದ ಹೊಸ ವಿಮಾನದಿಂದ ಇದು ಸಾಧ್ಯವಾಗಿದೆ.
ಹೊಸ ಏರ್ ಇಂಡಿಯಾ ಒನ್ ಬೋಯಿಂಗ್ ವಿಮಾನ ದೀರ್ಘಾವಧಿಯ ಹಾರಾಟದ ಸಾಮರ್ಥ್ಯ ಹೊಂದಿದೆ. ಮಾರ್ಗ ಮಧ್ಯೆ ಇಂಧನ ಮರುಭರ್ತಿಯ ಅಗತ್ಯ ಇರುವುದಿಲ್ಲ. ಪ್ರಧಾನಿಗಾಗಿ ಕಳೆದ ವರ್ಷ ಬೋಯಿಂಗ್ ವಿಮಾನವನ್ನು 4,500 ಕೋಟಿ ರೂಪಾಯಿ ವೆಚ್ಚದಲ್ಲಿ ಖರೀದಿ ಮಾಡಲಾಗಿತ್ತು. ಈ ವಿಮಾನದಲ್ಲಿ 2ನೇ ಬಾರಿಗೆ ಪ್ರಧಾನಿ ಮೋದಿ ವಿದೇಶ ಪ್ರಯಾಣ ಮಾಡಿದ್ದಾರೆ. ಪ್ರಸಕ್ತ ವರ್ಷ ಮಾರ್ಚ್‌ನಲ್ಲಿ ಬಾಂಗ್ಲಾದೇಶಕ್ಕೆ ಪ್ರಯಾಣ ಬೆಳೆಸಿದ್ದರು. ಇದೀಗ ಅಮೆರಿಕಕ್ಕೆ ತೆರಳಿದ್ದಾರೆ. ಇದರೊಂದಿಗೆ ಭಾರತ ಈಗ ಅಡ್ವಾನ್ಸ್ಡ್ ಏರ್ ಕ್ರಾಫ್ಟ್ ಹೊಂದಿದಂತಾಗಿದೆ. ಈ ಹಿಂದೆ ಪ್ರಧಾನ ಮಂತ್ರಿಗಳು
ಆಮೆರಿಕಕ್ಕೆ ಹೋಗವಾಗ ವಿಮಾನ ಜರ್ಮನಿಯ ಫ್ರಾಂಕ್ ಫರ್ಟ್ ನಲ್ಲಿ ಲ್ಯಾಂಡಿಂಗ್ ಆಗುತ್ತಿತ್ತು.