12:35 AM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

Water Dispute | ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ ಭೇಟಿ ನೀಡಿವೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

18/03/2025, 14:17

ಬೆಂಗಳೂರು(reporterkarnataka.com): ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು.
ಪೆನ್ನಾರ್ ನದಿ ನೀರಿನ ವಿಚಾರವಾಗಿ ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿತ್ತು. ಆದರೆ ಸೋಮವಾರ ರಾತ್ರಿ ತಮಿಳುನಾಡಿನ ಪ್ರತಿನಿಧಿಗಳು ಬರುವುದಿಲ್ಲ, ಅವರು ಪ್ರತ್ಯೇಕವಾಗಿ ಮನವಿ ಸಲ್ಲಿಸುತ್ತಾರೆ ಎನ್ನುವ ಸಂದೇಶವಿದೆ. ಅಲ್ಲಿಗೆ ಹೋದಾಗ ಇದರ ಸತ್ಯಾಸತ್ಯತೆ ತಿಳಿಯುತ್ತದೆ. ಆದರೆ ನಾನು ಆಹ್ವಾನವನ್ನು ತಿರಸ್ಕರಿಸಬಾರದು ಎಂದು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದರು.
ಜೊತೆಗೆ ಇತರೇ ಇಲಾಖೆಗಳ ಸಚಿವರು, ಅರಣ್ಯ ಇಲಾಖೆಯ ಸಚಿವರನ್ನು ಸಮಯ ಸಿಕ್ಕರೆ ಭೇಟಿ ಮಾಡಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಕಾಮಗಾರಿ ವೇಳೆ ವಿದ್ಯುತ್ ಕಂಬ ಬಿದ್ದು ಮಹಿಳೆಯರು ಮೃತಪಟ್ಟಿರುವ ವಿಚಾರದ ಬಗ್ಗೆ ಕೇಳಿದಾಗ, ಕಾಮಗಾರಿ ಸ್ಥಳಗಳಲ್ಲಿ ಈ ರೀತಿಯ ಅವಘಡಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡುತ್ತೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು