9:30 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 8ರಿಂದ 120 ದಿನಗಳವರೆಗೂ ನೀರು: ಸಚಿವ ಆರ್.ಬಿ. ತಿಮ್ಮಾಪೂರ

02/07/2025, 10:43

ಬೆಂಗಳೂರು(reporterkarnataka.com): ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ 80.58 ಟಿಎಂಸಿ ನೀರು ಸಂಗ್ರಹವಾಗಿದ್ದು, ಜುಲೈ 8ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್. ಬಿ. ತಿಮ್ಮಾಪೂರ ಅವರು ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಸಚಿವ ಆರ್ ಬಿ ತಿಮ್ಮಾಪೂರ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ 2025-26 ನೇ ಸಾಲಿನ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಯಿತು.


ಆಲಮಟ್ಟಿ ಮತ್ತು ನಾರಾಯಣಪುರ ಡ್ಯಾಂಗಳಲ್ಲಿ 80.58 ನೀರು ಸಂಗ್ರಹವಾಗಿದ್ದು, ಕಳೆದ ಸಾಲಿಗಿಂತ 54.77 ಟಿಎಂಸಿ ಹೆಚ್ಚುವರಿ ನೀರು ಸಂಗ್ರಹವಾಗಿದೆ. ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶವು ಮುಂಗಾರು ಹಂಗಾಮಿನ ಮಳೆ ಆಧರಿತವಾಗಿದ್ದು, ಮಳೆಯನ್ನು ಆಧರಿಸಿ ಅವಶ್ಯಕತೆಗೆ ತಕ್ಕಂತೆ ನೀರು ಹರಿಸಲು ಸಚಿವರು ಸೂಚಿಸಿದರು.
ಜುಲೈ 8ರಿಂದ ಮುಂದಿನ 120 ದಿನಗಳಿಗೆ‌ ಮುಂಗಾರು ಹಂಗಾಮಿಗೆ ನೀರು ಪೂರೈಸಲು ತೀರ್ಮಾನಿಸಲಾಗಿದೆ. ಒಳಹರಿವು ಆಧರಿಸಿ ಕಾಲುವೆಗಳಿಗೆ ಸತತವಾಗಿ ನೀರು ಬಿಡಲು ಸಚಿವ ತಿಮ್ಮಾಪೂರ ಅವರು ಅಧಿಕಾರಿಗಳಿಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು