6:11 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ನೀರು ಕ್ಷೀಣ: ಹಾರಂಗಿ ಅಣೆಕಟ್ಟೆಯ ಮುಂಭಾಗದ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

01/05/2026, 16:53

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಹಾರಂಗಿ ಅಣೆಕಟ್ಟೆಯಿಂದ 1 ಕಿಲೋಮೀಟರ್ ದೂರದಲ್ಲಿ ನದಿಗೆ ಅಡ್ಡಲಾಗಿ ಕಟ್ಟೆ ಒಂದು ಇದ್ದು ಇಲ್ಲಿಗೆ ಹಲವಾರು ಪ್ರವಾಸಿಗರು ಮತ್ತು ಕಾಲೇಜ್ ವಿದ್ಯಾರ್ಥಿಗಳು ಈಜಾಡುವುದರೊಂದಿಗೆ ಕುಡಿದು ಮೋಜು-ಮಸ್ತಿ ಮಾಡಿ ತೆರಳುತ್ತಿದ್ದರು. ಇದೀಗ ಅಲ್ಲಿ ದೊಡ್ಡ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡು ಭಯದ ವಾತಾವರಣ ಸೃಷ್ಟಿಸಿದೆ. ಮೊಸಳೆಯನ್ನು ಕಂಡು ಓಡಿ ಹೋಗಿ ಕೆಳಗೆ ಬಿದ್ದು ಕೆಲವು ವ್ಯಕ್ತಿಗಳು ಗಾಯಗೊಂಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹಾಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಕುರಿತು ಗಮನ ಹರಿಸಬೇಕು ಮತ್ತು
ಪ್ರವಾಸಿಗರು ಹಾಗೂ ಕಾಲೇಜು ವಿದ್ಯಾರ್ಥಿಗಳು ಮೋಜು ಮಸ್ತಿ ಮಾಡಲು ಬಂದು ಮೊಸಳೆ ಬಾಯಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು