5:48 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ನೀರು, ಮಣ್ಣು ದೇವರು ಕೊಟ್ಟ ಕಾಣಿಕೆ ಅದು ಸಂರಕ್ಷಣೆ ಮಾಡಬೇಕು: ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮೀಜಿ

22/02/2025, 19:22

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ರೈತರು ಮಣ್ಣು,ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕವಾಗಿದ್ದು, ಮನೆಗೊಂದು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಯಲ್ಲಿ ಪ್ರತಿಯೊಬ್ಬರು ಪಾಲದಾರರಾಗಬೇಕು ಎಂದು ಅಬ್ಬೆ ತುಮಕೂರಿನ ಶ್ರೀ ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮಿಗಳಾದ ಶಿವಶೇಖರ ಸ್ವಾಮಿ ಹೇಳಿದರು
ತಾಲೂಕಿನ ಅಬ್ಬೆತುಮಕೂರ ಗ್ರಾಮದ ಶ್ರೀ ವಿಶ್ವರಾಧ್ಯ ಸಿದ್ದ ಸಂಸ್ಥಾನ ಮಠದಲ್ಲಿ ಜಿಲ್ಲಾ ಪಂಚಾಯತ್ ಯಾದಗಿರಿ, ಕೃಷಿ ಇಲಾಖೆ ಯಾದಗಿರಿ ವತಿಯಿಂದ ಪ್ರದಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ, ಜಲಾನಯನ ಯಾತ್ರೆ ಪ್ರಯುಕ್ತ ಪಾನಿ ಕೀ ಪಾಠ ಶಾಲಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೇಸಿಗೆ ಆರಂಭವಾಗಿದ್ದು, ನೀರನ್ನು ಮಿತವಾಗಿ ಬಳಸಬೇಕು. ಮಾನವ ಹಾಗೂ ಪ್ರಾಣಿ-ಪಕ್ಷಿ ಸಂಕುಲ ಆಹಾರವಿಲ್ಲದೆ ಹಲವಾರು ದಿನಗಳು ಬದುಕಬಹುದು. ಆದರೆ ಕುಡಿಯುವ ನೀರಿಲ್ಲದೆ ಒಂದು ದಿನಬದುಕುವುದೂ ಅತೀ ಕಷ್ಟ ಎಂದರು.
ಮಳೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದ ನೀರಿನ ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ನೀರನ್ನು ಪೋಲು ಮಾಡದೆ ಎಚ್ಚರಿಕೆಯಿಂದ ಬಳಸಬೇಕು ಎಂದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಮಾತನಾಡಿ, ನೀರನ್ನು ಮಿತವಾಗಿ ಬಳಸಬೇಕು. ನೀರಿನ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ. ನಾವೆಲ್ಲರೂ ಸಂಶೋಧನೆಗಳಿಂದ ಎಷ್ಟೇ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಮುಂದುವರಿದರೂ, ನಮ್ಮಿಂದ ನೀರನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ನೀರು ದೇವರು ಕೊಟ್ಟ ಕಾಣಿಕೆ. ಅದನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕೆಂದರೆ ನೀರನ್ನು ಸಂರಕ್ಷಿಸಬೇಕು ಎಂದರು.
ಈ‌ ಸಂದರ್ಭದಲ್ಲಿ ಸಹಾಯಕ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳಾದ ಯಾಮ ರೆಡ್ಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರುಗಳಾದ ಬಸವರಾಜ ಬೊಮ್ಮನ, ಟಾಟಾ ಟ್ರಸ್ಟ್ ಕಾರ್ಯಕ್ರಮ ಸಂಯೋಜಕ ಮಂಜುನಾಥ, ಅಬ್ಬೆತುಕೂರಿನ ಪಶು ವೈದ್ಯಾಧಿಕಾರಿ ಡಾ. ಶಿವಮಂಗಲಾ, ತೋಟಗಾರಿಕೆ ವಿಸ್ತಾರಣ ಮುಂದಾಳು ರಾಜಕುಮಾರ, ಸಹಾಯಕ ಕೃಷಿ ನಿರ್ದೇಶಕರು ವಿಷಯ ತಜ್ಷರಾದ ರಾಜಕುಮಾರ, ಅಬ್ಬೆಮಕೂರಿನ ಬಿಎಡ್ ವಿದ್ಯಾರ್ಥಿಗಳು, ಹಾಗೂ ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು