ಇತ್ತೀಚಿನ ಸುದ್ದಿ
ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ
01/10/2025, 22:48

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಬಹಳ ವಿಜೃಂಭಣೆಯಿಂದ ನೆರವೇರಿತು.
ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿತ್ತು, ಯದುವೀರ್ ಒಡೆಯರ್ ಅವರು ಪೂಜೆ ನೆರವೇರಿಸಿದರು, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಾಜ ಪುರೋಹಿತರ ಮಾರ್ಗದರ್ಶನದಲ್ಲಿ ಆಯುಧ ಪೂಜೆ ನೆರವೇರಿಸಿದರು. ಬಳಿಕ ಪಟ್ಟದ ಆನೆ, ಒಂಟೆ, ಕುದುರೆ, ಎತ್ತು, ಎತ್ತಿನ ಗಾ ಡಿ ಸೇರಿದಂತೆ ರಾಜ ಮನೆತನ ಬಳಸುವ ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು.ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಯಿತು.