10:14 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ವೀಕೆಂಡ್ ಕರ್ಫ್ಯೂ: ಕಾಫಿನಾಡು ಚಿಕ್ಕಮಗಳೂರು ಸ್ತಬ್ಧ; ರಸ್ತೆಗಳೆಲ್ಲ ಖಾಲಿ ಖಾಲಿ 

08/01/2022, 15:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಾರಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಇಂದು ಬಹುತೇಕ ಸ್ತಬ್ಧವಾಗಿದೆ. ಸದಾ ಜನ ಮತ್ತು ವಾಹನಗಳಿಂದ ಗಿಜಿಗುಡುತ್ತಿದ್ದ ಮಹಾತ್ಮಗಾಂಧಿ ರಸ್ತೆ, ಮಾರ್ಕೆಟ್ ರಸ್ತೆ,  ಐಜಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳೆಲ್ಲ ಖಾಲಿ ಖಾಲಿ ಹೊಡೆಯುತ್ತಿದ್ದವು.

ರಸ್ತೆ ಸಾರಿಗೆ ಬಸ್ ಸಂಚಾರ ಇದ್ದರೂ ಪ್ರಯಾಣಿಕರಿಲ್ಲದೆ ಖಾಲಿ ಹೊಡೆಯುತ್ತಿದ್ದವು . 

ಕರ್ಫ್ಯೂ  ಮಧ್ಯೆ ಕೆಲಸವಿಲ್ಲದೆ ಓಡಾಡುತ್ತಿದ್ದ ಹಲವರು ಪೊಲೀಸರ ಕೈಗೆ ಸಿಕ್ಕಿಬಿದ್ದು ದಂಡ ತೆರಬೇಕಾಯಿತು .

ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಲಾಗಿತ್ತು. ಎಲ್ಲೆಡೆ ಪೊಲೀಸ್ ಕಣ್ಗಾವಲು ಇರಿಸಲಾಗಿತ್ತು .

2 ನೇ ಶನಿವಾರವಾಗಿದ್ದರಿಂದ ಸಹಜವಾಗಿ ಸರ್ಕಾರಿ ಕಚೇರಿ, ಬ್ಯಾಂಕ್ ಗೆ ರಜೆ ಇತ್ತು. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ತುರ್ತು ಸೇವೆಗಳಿಗೆ ಬೆರಳೆಣಿಕೆಯಷ್ಟು  ಜನ ತಿರುಗಾಡುತ್ತಿದ್ದು  ಪೊಲೀಸರಿಗೆ ಸೂಕ್ತ ಸಮಜಾಯಿಸಿ ನೀಡಬೇಕಾಗಿತ್ತು . ಹಣ್ಣು ತರಕಾರಿ ಇನ್ನಿತರ ಕೆಲ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿದ್ದರೂ ಖರೀದಿಸುವವರ ಸಂಖ್ಯೆ ವಿರಳವಾಗಿತ್ತು .

ಇತ್ತೀಚಿನ ಸುದ್ದಿ

ಜಾಹೀರಾತು