6:39 PM Thursday16 - January 2025
ಬ್ರೇಕಿಂಗ್ ನ್ಯೂಸ್
ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ…

ಇತ್ತೀಚಿನ ಸುದ್ದಿ

ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ವ್ಯವಸ್ಥೆ: ಆಸ್ಪತ್ರೆ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಸಭೆ

20/05/2021, 11:55

ಮಂಗಳೂರು(reporterkarnataka news);

ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗಾಗಿ ನೀಡುವ ಚಿಕಿತ್ಸೆ ಹಾಗೂ ಆಸ್ಪತ್ರೆಯ ವ್ಯವಸ್ಥೆಯ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. 

ಸಭೆಯಲ್ಲಿ ಮಾತನಾಡಿದ ‌ಶಾಸಕ ಕಾಮತ್, ರೋಗಿಗಳಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಸರಬರಾಜು ಮಾಡಬೇಕು. ಪ್ರಮುಖವಾಗಿ ಕೋವಿಡ್ ಸೋಂಕಿತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ವೈದ್ಯರಿಗೆ ಹಾಗೂ ದಾದಿಯರಿಗೆ ಕೌನ್ಸಿಲಿಂಗ್ ಮಾಡುವ ಕುರಿತು ಆಲೋಚಿಸಬೇಕಾಗಿದೆ ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. 

ಪ್ರತಿನಿತ್ಯ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತುವ ವೈದ್ಯರು ಮಾನಸಿಕವಾಗಿ ಕುಗ್ಗದಂತೆ ಕೌನ್ಸಿಲಿಂಗ್ ನಡೆಸುವ ಅನಿವಾರ್ಯತೆಯ ಕುರಿತು ಪರಿಶೀಲಿಸುವಂತೆ ವೈಧ್ಯಾಧಿಕಾರಿಗಳು ಆಲೋಚಿಸಬೇಕು. ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಾಸವಾಗದಂತೆ ಎಚ್ಚರವಹಿಸಬೇಕು. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ತುರ್ತಾಗಿ ವಿಲೇವಾರಿ ಮಾಡುವ‌ ಕುರಿತು ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆ ಮುಖ್ಯ ಸಚೇತಕರಾದ‌ ಸುಧೀರ್‌ ಶೆಟ್ಟಿ ಕಣ್ಣೂರು, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ, ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಅಧ್ಯಕ್ಷರಾದ ಡಾ. ಅಣ್ಣಯ್ಯ ಕುಲಾಲ್,ಬಿಜೆಪಿ ಜಿಲ್ಲಾ ವಕ್ತಾರರಾದ ಜಗದೀಶ್ ಶೇಣವ, ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು