8:57 AM Tuesday12 - November 2024
ಬ್ರೇಕಿಂಗ್ ನ್ಯೂಸ್
ಗಣಿ ಮಾಫಿಯಾ, ಹಣದ ಶಕ್ತಿ, ಸುಳ್ಳು ಪ್ರಚಾರದಿಂದ ರಕ್ಷಿಸಲು ಮತ ಚಲಾಯಿಸಿ: ಗೋಪಿನಾಥ್… ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ ಎಜ್ಯುಟೆಕ್ ಸ್ಟಾರ್ಟ್ ಅಪ್ ಭಾಂಜು ವಿಶ್ವಾದ್ಯಂತ ವಿಸ್ತರಿಸಲು ಸರಣಿ ಬಿ ನಿಧಿಯಡಿ 16.5… ಕಲ್ಲಡ್ಕದಲ್ಲಿ ರಾಜ್ಯಮಟ್ಟದ ಕನ್ನಡ ಶಾಲೆಗಳಿಗೆ ಸಮ್ಮಾನ; ಮಾತೃ ಭಾಷೆಗೆ ಪ್ರಾಧಾನ್ಯ ಸಿಗಬೇಕು: ಸಿ.ಎ.ಶಾಂತಾರಾಮ… ಮರಾಟಿಗರ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಮೂಡುಬಿದಿರೆಯಲ್ಲಿ ಸಮಾವೇಶ ಉದ್ಘಾಟಿಸಿ ಸಚಿವ… ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1ರಿಂದ 2 ಲಕ್ಷಕ್ಕೆ… ಕೋವಿಡ್‌; ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಭ್ರಷ್ಟಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಕೋವಿಡ್ ಹಗರಣದ ಕುರಿತು ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ ಹಣಗೆರೆಕಟ್ಟೆ ದೇವಸ್ಥಾನದ ಹಣ ಏರುಪೇರು ಆಗಿದ್ದು ಹೇಗೆ!?: ದೇವರ ಹಣದ ಲೆಕ್ಕ ಪಕ್ಕಾ… ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಶಸ್ತ್ರ ಚಿಕಿತ್ಸ ಕೊಠಡಿ ಕಾರ್ಯಾರಂಭ

ಇತ್ತೀಚಿನ ಸುದ್ದಿ

ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಶಸ್ತ್ರ ಚಿಕಿತ್ಸ ಕೊಠಡಿ ಕಾರ್ಯಾರಂಭ

09/11/2024, 16:08

ಮಂಗಳೂರು(reporter Karnataka.com): ವೆನ್‍ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ತಜ್ಞ ವೈದ್ಯ ಡಾ ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯಾರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು. ಡಾ ಅರ್ಜುನ್ ಶೆಟ್ಟಿ ತಂಡವು ಮೆದುಳಲ್ಲಿ ರಕ್ತ ಹೆಪ್ಪು ಗಟ್ಟಿದ ರೋಗಿಗೆ ತುರ್ತು ಶಸ್ತ್ರ ಚಿಕಿತ್ಸೆ ಮಾಡಿದರು. ಡಾ ಸುರೇಶ ಭಟ್ ಅರವಳಿಕೆ ತಂಡದ ಮುಖ್ಯಸ್ಥರಾಗಿದ್ದು ಎಲ್ಲಾ ಶಸ್ತ್ರ ಚಿಕಿತ್ಸೆ ಯಾವುದೇ ತೊಂದರೆ ಆಗದ ಹಾಗೆ ನೆರವೇರಿಸಿದರು.
ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ನಸಿರ್ಂಗ್ ಅಧಿಕಾರಿಗಳಾದ ಶೈಲಾ, ಜೇಸಿಂತ, ಅಶ್ವಿನಿ, ರೇಷ್ಮಾ, ಅಲ್ವನ ಮೆನೇಜ್ಸ್ ಇದ್ದರು. ಓಟಿ ಟೆಕ್ನಿಷಿಯನ್‍ಗಳಾದ ಧನುಷ್, ಶ್ರದ್ದಾ, ಹೇಮಾಶ್ರೀ, ಅರ್ಪಿತಾ, ಪ್ರದೀಪ್ ಹಾಗೂ ಡಿ ಗ್ರೂಪ್ ನೌಕರರಾದ ಜಯಪ್ರಕಾಶ್ ಮತ್ತು ಹರೀಶ್ ಉಪಸ್ಥಿತರಿದ್ದರು.
ಡಿಸೆಂಬರ್ 1ರಿಂದ ಶಸ್ತ್ರ ಚಿಕಿತ್ಸಾ ಹಾಗೂ ಮೂಳೆ ವಿಭಾಗದ ಶಸ್ತ್ರ ಚಿಕಿತ್ಸಾ ಕೊಠಡಿ ಪ್ರಾರಂಭವಾಗಲಿದ್ದು, ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ವಾರ್ಡ್‍ಗಳು ಈ ಭಾಗದ ಬಡವರಿಗೆ ವರದಾನ ಆಗಲಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು