8:57 PM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಯುವ ಖೈದಿ ಆತ್ಮಹತ್ಯೆ: ಡ್ರಗ್ಸ್ ಪ್ರಕರಣದಲ್ಲಿ ಬಂಧನ

06/05/2024, 22:20

ಮಂಗಳೂರು(reporterkarnataka.com): ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲ್ಪಟ್ಟಿದ್ದ ವಿಚಾರಣಾಧೀನ ಯುವ ಖೈದಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಾಸರಗೋಡಿನ ಬಂದ್ಯೋಡು ನಿವಾಸಿಯಾದ 24ರ ಹರೆಯದ ಮಹಮ್ಮದ್ ನೌಫಾಲ್ ಆತ್ಮಹತ್ಯೆಗೆ ಶರಣಾದ ಯುವ ಖೈದಿ. ಈತ ಡ್ರಗ್ಸ್ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದ. ಡ್ರಗ್ಸ್ ಮಾರಾಟದ ಜತೆಗೆ ಡ್ರಗ್ಸ್ ಸೇವನೆಯ ಚಟವನ್ನೂ ಹೊಂದಿದ್ದ ಎನ್ನಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಚಿಕಿತ್ಸೆಗಾಗಿ ಏಪ್ರಿಲ್ 25ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾನಸಿಕ ಖಿನ್ನತೆಯಿಂದ ಇಂದು ಮುಂಜಾನೆ 4 ಗಂಟೆಯ ವೇಳೆಗೆ ಬೆಡ್ ಶೀಟ್ ಸಹಾಯದಿಂದ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು