1:11 PM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ವೆನ್ಲಾಕ್ – ಲೇಡಿಗೋಶನ್ ಆಸ್ಪತ್ರೆಗಳು ರಾಜ್ಯಕ್ಕೆ ಮಾದರಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

10/04/2026, 21:04

ಮಂಗಳೂರು(reporterkarnataka.com): ವೆನ್ಲಾಕ್ ಹಾಗೂ ಲೇಡಿಗೋಶನ್ ಆಸ್ಪತ್ರೆಗಳು ರಾಜ್ಯದಲ್ಲೇ ಮಾದರಿಯಾಗಿ ಗುರುತಿಸಿಕೊಂಡಿವೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಶುಕ್ರವಾರ ಪವರ್ ಗ್ರಿಡ್ ಕಾರ್ಪೊರೇಷನ್ ಸಂಸ್ಥೆಯ ಸಿಎಸ್‌ಆರ್ ಉಪಕ್ರಮದಡಿಯಲ್ಲಿ 68.8 ಲಕ್ಷ ರೂ.ಮೊತ್ತದ ವಿವಿಧ ವೈದ್ಯಕೀಯ ಉಪಕರಣ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಅತಿಥಿಯಾಗಿ ಅವರು ಮಾತನಾಡಿದರು.
ವೆನ್ಲಾಕ್ ಆಸ್ಪತ್ರೆ ಮತ್ತು ಕೆಎಂಸಿ ಆಸ್ಪತ್ರೆ ಒಡಂಬಡಿಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ 1 ಲಕ್ಷ ಚದರಡಿ ಹೆಚ್ಚುವರಿ ಸ್ಥಳವನ್ನು ನಿರ್ಮಿಸಿಕೊಡಲಿದ್ದಾರೆ. ಅಲ್ಲದೆ ಹೆಚ್ಚುವರಿ ಸೇವೆಗಳನ್ನೂ ಕೆಎಂಸಿ ಒದಗಿಸಲಿದೆ. 70 ಕೋಟಿ ರೂ. ವೆಚ್ಚದಲ್ಲಿ ಹೊಸ ಒಪಿಡಿ ಬ್ಲಾಕ್ ಅನ್ನು ಸರಕಾರ ನಿರ್ಮಿಸುತ್ತಿದೆ. ಈ ಮೂಲಕ ಆರೋಗ್ಯ ಸೇವೆ ವಿಸ್ತಾರಗೊಳ್ಳುತ್ತಿದೆ ಎಂದವರು ಹೇಳಿದರು.
ಜಿಲ್ಲೆಯಲ್ಲಿ ಆರೋಗ್ಯ ಸೇವೆಗಳನ್ನು ಸುಧಾರಿಸುವ ಉದ್ದೇಶದಿಂದ ವಿವಿಧ ತಾಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯಗಳು ಹಾಗೂ ಖಾಸಗಿ ವೈದ್ಯಕೀಯ ಕಾಲೇಜು, ಸಂಸ್ಥೆಗಳ ನಡುವೆ ಒಪ್ಪಂದ ಮಾಡಿಕೊಳ್ಳ ಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಯೆನಪೊಯ ವೈದ್ಯಕೀಯ ಕಾಲೇಜು, ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಎ.ಜೆ.ವೈದ್ಯಕೀಯ ಕಾಲೇಜುಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಮೂಲಕ ಸೇವೆಯಲ್ಲಿ ಗಣನೀಯ ಸುಧಾರಣೆಯಾಗಲಿದೆ ಎಂದರು.
ನೆರವು ಒದಗಿಸಿಕೊಟ್ಟಿರುವ ಪವರ್ ಗ್ರಿಡ್ ಕಾರ್ಪೊರೇಷನ್ ಅನ್ನು ಅಭಿನಂದಿಸಿದ ಸಚಿವರು, ಇನ್ನಷ್ಟು ನೆರವು ನೀಡುವಂತೆ ಮನವಿ ಮಾಡಿದರು. ಲ್ಯಾಪ್ರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಉಪಕರಣಗಳು, ಅನಸ್ತೇಸಿಯಾ ವರ್ಕ್ ಸ್ಟೇಷನ್ ವೆಚ್ಚವಾಗಿ 68.8 ಲಕ್ಷ ರೂ. ರೂ. ನೆರವನ್ನು ಸಿಎಸ್‌ಆರ್ ಅಡಿಯಲ್ಲಿ ಒದಗಿಸಲಾಗಿದೆ.
ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕೆಎಂಸಿ ಡೀನ್ ಉಣ್ಣಿಕೃಷ್ಣನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ವೆನ್ಲಾಕ್ ವೈದ್ಯಕೀಯ ಅಧೀಕ್ಷಕ ಡಾ.ಶಿವಪ್ರಕಾಶ್, ಲೇಡಿಗೋಶನ್ ಆಸ್ಪತ್ರೆಯ ಅಧೀಕ್ಷ ಡಾ. ದುರ್ಗಾಪ್ರಸಾದ್, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು