9:10 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪಶ್ಚಿಮ ಬಂಗಾಳ | ಮತದಾನದ ವೇಳೆ ನಾಡ ಬಾಂಬ್ ದಾಳಿ: ರಾಜ್ಯದ ಎಲ್ಲಾ ಮತಗಟ್ಟೆ ಹೈ ಅಲರ್ಟ್

23/04/2026, 16:09

ಕೋಲ್ಕತ್ತಾ(reporterkarnatak.com): ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಈ ವೇಳೆ ದುಷ್ಕರ್ಮಿಗಳು ಬಾಂಬ್ ದಾಳಿ ನಡೆಸಿರುವ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಮತದಾನದ ವೇಳೆ ಕೆಲವು ದುಷ್ಕರ್ಮಿಗಳು ಕಚ್ಚಾ ಬಾಂಬ್ ಎಸೆದಿದ್ದಾರೆ. ಬಾಂಬ್ ದಾಳಿಯಿಂದಾಗಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೌಡಾದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.


ಜಿಲ್ಲೆಯಲ್ಲಿ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ನಿನ್ನೆ ರಾತ್ರಿ ಶಿವನಗರ ಪ್ರಾಥಮಿಕ ಶಾಲೆಯ ಬಳಿ ಕಚ್ಚಾ ಬಾಂಬ್‌ ದಾಳಿ ನಡೆದಿತ್ತು. ಘಟನೆಯಲ್ಲಿ ಓರ್ವ ಮಹಿಳೆ ಗಾಯಗೊಂಡಿದ್ದರು. ಸಮೀಪದಲ್ಲಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಸಾಹಿನಾ ಮುಮ್ತಾಜ್ ಖಾನ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆಯ ನಂತರ, ಮುರ್ಷಿದಾಬಾದ್ ಜಿಲ್ಲೆಯಲ್ಲಿ ಎಲ್ಲೆಡೆ ಕಟ್ಟೆಚ್ಚರವಹಿಸಲಾಗಿದ್ದು, ಮತದಾನ ಮುಂದುವರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು